Sunday, 24th November 2024

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ‘ಸೇಹತ್’ ಯೋಜನೆ ಉದ್ಘಾಟನೆ

ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಎಲ್ಲ ನಿವಾಸಿಗಳಿಗೆ ಆರೋಗ್ಯ ವಿಮೆ ವಿಸ್ತರಿಸುವ ಸಲುವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿಎಂಜೆಎವೈ) ಸೇಹತ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು.

ಮೋದಿ ಅವರು ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ, ಜಮ್ಮು ಮತ್ತು ಕಾಶ್ಮೀರದ ಜನತೆಗೆ ಅಭಿನಂದನೆ ಸಲ್ಲಿಸಿದರು ಮತ್ತು ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವಂತೆ ನೋಡಿ ಕೊಂಡಿತು.

ಆಯುಷ್ಮಾನ್‌ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿ ಎಂಜೆಎವೈ)ಯ ವರ್ಚುವಲ್ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ನಾ ಕೂಡಾ ಭಾಗವಹಿಸಿದ್ದರು.

ಈ ಸ್ಕೀಮ್ ಎಲ್ಲಾ ವಿಧದ ಆರೋಗ್ಯ ಸಂಬಂಧಿ ಹಾಗೂ ಆರ್ಥಿಕ ರಕ್ಷಣೆ ನೀಡುವುದರ ಜತೆಗೆ ಅಗತ್ಯವಿರುವ ಆರೋಗ್ಯ ಸೇವೆಯನ್ನು ಜನತೆಗೆ ಒದಗಿಸಲಿದೆ. ಜಮ್ಮು-ಕಾಶ್ಮೀರದ ಮತ್ತು ಕೇಂದ್ರಾಡಳಿತ ಪ್ರದೇಶದೆ ಎಲ್ಲಾ ನಾಗರಿಕರ ಪ್ರತೀ ಕುಟುಂಬಕ್ಕೆ 5 ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ನೀಡಲಿದೆ. ಅಲ್ಲದೇ ಇದು ಹೆಚ್ಚುವರಿಯಾಗಿ ಸುಮಾರು 15 ಲಕ್ಷ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

21 ಲಕ್ಷ ಮಂದಿಗೆ ಇದರಿಂದ ಪ್ರಯೋಜನವಾಗಲಿದೆ. ಪ್ರತೀ ಕುಟುಂಬಕ್ಕೆ 5 ಲಕ್ಷ ರೂ.ಮೌಲ್ಯದ ಆರೋಗ್ಯ ವಿಮೆ ಇದರ ವ್ಯಾಪ್ತಿಯಲ್ಲಿ ಸಿಗಲಿದೆ. ವಿಶೇಷ ಸ್ಥಾನಮಾನ ರದ್ದುಗೊಂಡ ಬಳಿಕ ಕೇಂದ್ರಾಡಳಿತ ಪ್ರದೇಶಕ್ಕೂ ಕೇಂದ್ರದ ಯೋಜನೆಗಳು ಈಗ ವಿಸ್ತರಣೆಯಾಗುತ್ತಿವೆ.