Monday, 9th December 2024

ದೇವಮಾನವ ಶಿವಶಂಕರ್ ಬಾಬಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಚೆನ್ನೈ: ಸ್ವಯಂಘೋಷಿತ ದೇವಮಾನವ ಶಿವಶಂಕರ್ ಬಾಬಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರೆಸ ಲಾಗಿದೆ.

ಶಾಲಾ ಮಕ್ಕಳಿಗೆ ಲೈಂಗಿಕವಾಗಿ ಹಿಂಸೆ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಶಾಲೆಯ ಕೆಲವು ವಿದ್ಯಾರ್ಥಿಗಳು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿ ಕ್ರಮ ಜರುಗಿಸಲಾಗಿದೆ. ಚೆನ್ನೈನ ಪ್ರತಿಷ್ಠಿತ ಸುಶೀಲ್ ಹರಿ ಇಂಟರ್ ನ್ಯಾಷನಲ್ ವಸತಿ ಶಾಲೆಯ ಸ್ಥಾಪಕರ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ದೂರು ದಾಖಲಾಗಿದೆ ಎಂದು ಪೊಲೀಸರು ಹೇಳಿದರು.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ(POCSO) ಕಾಯ್ದೆ, ಭಾರತೀಯ ದಂಡ ಸಂಹಿತೆ(ಐಪಿಎಸ್) ವಿವಿಧ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಎಫ್‌ಐಆರ್ ಹಾಕಲಾಗಿದೆ.