ಮುಂಬೈ: ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಬುಧವಾರ 200ಕ್ಕೂ ಅಧಿಕ ಅಂಕ ಏರಿಕೆ ಕಂಡಿದೆ.
ಇದರಿಂದಾಗಿ ಎಚ್ ಡಿಎಫ್ ಸಿ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಐಸಿಐಸಿಐ ಬ್ಯಾಂಕ್ ಷೇರು ಲಾಭಗಳಿಸಿದೆ. ಮುಂಬೈ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಸಾರ್ವಕಾಲಿಕ ಗರಿಷ್ಠ 56,188.49 ಅಂಕ ತಲುಪಿದ್ದು ಬಳಿಕ ಷೇರುಪೇಟೆ ಸೆನ್ಸೆಕ್ಸ್ 211.23 ಅಂಕಗಳ ಏರಿಕೆಯೊಂದಿಗೆ 56,170.21 ಅಂಕಗಳಲ್ಲಿ ವಹಿವಾಟು ನಡೆಸಿದೆ.
ಎನ್ಎಸ್ಇ ನಿಫ್ಟಿ 67.75 ಅಂಕ ಏರಿಕೆಯೊಂದಿಗೆ ದಾಖಲೆಯ 16,692.35 ಅಂಕಗಳ ಮಟ್ಟ ತಲುಪಿದೆ. ಸೆನ್ಸೆಕ್ಸ್ ಏರಿಕೆಯಿಂದ ಟಾಟಾ ಸ್ಟೀಲ್, ಎನ್ ಟಿಪಿಸಿ, ಎನ್ ಟಿಪಿಸಿ, ಎಲ್ ಆಯಂಡ್ ಟಿ, ನೆಸ್ಲೆ ಇಂಡಿಯಾ, ಐಸಿಐಸಿಐ ಬ್ಯಾಂಕ್, ಬಜಾಜ್ ಫಿನ್ ಸರ್ವ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಟೈಟಾನ್, ಟೆಕ್ ಮಹೀಂದ್ರ, ಎಚ್ ಸಿಎಲ್ ಟೆಕ್, ಏಷ್ಯನ್ ಪೇಂಟ್ಸ್ ಮತ್ತು ಡಾ.ರೆಡ್ಡೀಸ್ ಷೇರುಗಳು ನಷ್ಟ ಕಂಡಿದೆ.
ನಿಫ್ಟಿ ಕೂಡ 128.15 ಅಂಕ ಏರಿಕೆಯೊಂದಿಗೆ 16,624.60 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು.