Saturday, 23rd November 2024

ಸೆಂಥಿಲ್ ಬಾಲಾಜಿ ಸರ್ಕಾರಿ ಆಸ್ಪತ್ರೆಗೆ ದಾಖಲು

ಚೆನ್ನೈ: ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಬಂಧಿತರಾಗಿರುವ ತಮಿಳುನಾಡು ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಸೋಮವಾರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಸೆಂಥಿಲ್ ಬಾಲಾಜಿಯನ್ನು ಪ್ರಸ್ತುತ ಇಲ್ಲಿನ ಪುಳಲ್ ಜೈಲಿನಲ್ಲಿ ಇರಿಸಲಾಗಿತ್ತು. ಈ ಹಿಂದೆ ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಸೆಂಥಿಲ್ ಬಾಲಾಜಿಗೆ ವೈದ್ಯರು ಆಯಂಜಿಯೋಗ್ರಾಮ್ ಶಸ್ತ್ರಚಿಕಿತ್ಸೆ ನಡೆಸಿದ್ದರು.
ಇದೀಗ ಮತ್ತೆ ಅನಾರೋಗ್ಯದ ಕಾರಣ ಸೆಂಥಿಲ್ ಬಾಲಾಜಿ ಅವರನ್ನು ಸೋಮವಾರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.