ಮುಂಬೈ: ಗೃಹ ಸಚಿವ ಅಮಿತ್ ಶಾ ಅವರು ಮುಂಬೈ ಭೇಟಿ ನೀಡಿದ ಬೆನ್ನಲ್ಲೇ ಸ್ಥಳೀಯ ರೈಲುಗಳಲ್ಲಿ ಸರಣಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ.
ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು, ಓರ್ವನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಅಶೋಕ್ ಮುಖಿಯಾ ಎಂದು ಗುರುತಿಸಲಾಗಿದೆ.
ಆರೋಪಿ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಲೋಕಲ್ ಟ್ರೈನ್ಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದ. ಪೊಲೀಸರು ಯಾವ ರೈಲು, ಸ್ಥಳ ಎಂಬ ಬಗ್ಗೆ ಮಾಹಿತಿ ಕೇಳಿದಾಗ, ಕಾಲ್ ಕಟ್ ಮಾಡಿದ್ದ. ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದ.
ಆರೋಪಿಯ ಬೆದರಿಕೆ ಕರೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿದ್ದಾರೆ. ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ರವಾನಿಸಲಾಯಿತು.
ಫೋನ್ ಕರೆ ಬಂದ ಮಾಹಿತಿ ಆಧಾರದ ಅನ್ವಯ ಕಾಲ್ ಟ್ರ್ಯಾಕ್ ಮಾಡಿ ಆರೋಪಿ ಮುಖಿಯಾ ಎಂಬಾತನನ್ನು ಬಂಧಿಸಿದ್ದಾರೆ.