ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದ ಕಲಾಪಗಳು ಮಂಗಳವಾರದಿಂದ ಹೊಸ ಸಂಸತ್ ಕಟ್ಟಡದಲ್ಲಿ ಆರಂಭವಾಗಿದೆ.
ಮೇ.28ರಂದು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಿದ್ದ ಹೊಸ ಸಂಸತ್ ಭವನಕ್ಕೆ ಚಾಲನೆ ನೀಡಲಾಗುತ್ತಿದೆ. ಹೊಸ ಸಂಸತ್ತಿನಲ್ಲಿ 5 ದಿನಗಳ ಕಾಲ ವಿಶೇಷ ಅಧಿವೇಶನ ನಡೆಯಲಿದೆ. ಸೋಮವಾರ ದಿಂದ ಸಂಸತ್ತಿನ ವಿಶೇಷ ಆರಂಭವಾಗಿದ್ದು, ಭಾರತದ 75 ವರ್ಷಗಳ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಹಳೇ ಸಂಸತ್ ಕಟ್ಟಡದಲ್ಲಿ ಚರ್ಚೆಗಳು ನಡೆದವು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವರು ಮಾತನಾಡಿದರು.
ಮಂಗಳವಾರ ಮಧ್ಯಾಹ್ನ ನೂತನ ಸಂಸತ್ ಭವನದಲ್ಲಿ ಲೋಕಸಭೆಯ ಕಲಾಪ ಆರಂಭವಾಗಲಿದ್ದು, ರಾಜ್ಯಸಭೆ ಕಲಾಪ ಮಧ್ಯಾಹ್ನ 2.15ಕ್ಕೆ ಶುರುವಾಗಲಿದೆ. ಇಂದು ನಡೆಯುವ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ, ಒನ್ ನೇಷನ್ ಒನ್ ಎಲೆಕ್ಷನ್, ಇಂಡಿಯಾ ಹೆಸರು ಬದಲಾವಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆಗಳು ನಡೆಯಲಿವೆ ಹಾಗೂ ವಿಶೇಷ ಅಧಿವೇಶದ ಜೊತೆಗೆ ಬಿಲ್ಗಳ ಮಂಡನೆಯ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.
ಮೊದಲ ದಿನವಾದ ಇಂದು 75 ವರ್ಷಗಳ ಸಂಸದೀಯ ಪಯಣ – ಸಾಧನೆಗಳು, ಅನುಭವಗಳು, ನೆನಪುಗಳು ಮತ್ತು ಪಾಠಗಳ ಕುರಿತು ಚರ್ಚೆ ನಡೆಯಲಿದೆ.