Sunday, 15th December 2024

ವಿದೇಶಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರೊಫೆಸರ್ ಬಂಧನ

ಹೈದ್ರಾಬಾದ್: ವಿದೇಶಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ಆರೋಪದ ಮೇರೆಗೆ ಹೈದ್ರಾಬಾದ್ ವಿಶ್ವ ವಿದ್ಯಾಲಯದ ಪ್ರೊಫೆಸರ್ ಒಬ್ಬರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ವಿಶ್ವವಿದ್ಯಾಲಯದ ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸ ಲಾಗಿದ್ದು, 62 ವರ್ಷದ ಪ್ರೊಫೆಸರ್ ನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಥೈಲ್ಯಾಂಡ್ ನ ಸ್ನಾತಕೋತ್ತರ ವಿದ್ಯಾರ್ಥಿನಿಗೆ ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಮಾತ ನಾಡಲು ಬಾರದ ಹಿನ್ನೆಲೆಯಲ್ಲಿ ಆಕೆಯ ಹೇಳಿಕೆ ದಾಖಲಿಸಲು ಅನುವಾದಕರ ಸೇವೆ ಬಯಸಿದ್ದು, ಆಕೆಯ ಹೇಳಿಕೆ ಆಧಾರದ ಮೇಲೆ ಪೊಲೀಸರು ಮುಂದಿನ ತನಿಖೆ ಪ್ರಕ್ರಿಯೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರೊಫೆಸರ್ ತನ್ನ ಮನೆಯಲ್ಲಿ ವಿದೇಶಿ ವಿದ್ಯಾರ್ಥಿನಿಗೆ ಕಿಸ್ ಮಾಡಿ ತಬ್ಬಿಕೊಳ್ಳಲು ಪ್ರಯತ್ನಿಸಿದ ಆರೋಪ ಕೇಳಿ ಬಂದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.