Friday, 22nd November 2024

ಲೈಂಗಿಕ ಪ್ರಕರಣ: ಕುಸ್ತಿಪಟುಗಳ ಧರಣಿ ಅಂತ್ಯ

ನವದೆಹಲಿ: ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳ ನಡೆಸುತ್ತಿದ್ದ ಧರಣಿಯನ್ನ ಅಂತ್ಯಗೊಳಿಸಿದ್ದಾರೆ.

ಲೈಂಗಿತ ಕಿರುಕುಳ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ ಬೃಜ್ ಭೂಷಣ್ ಶರಣ್ ಸಿಂಗ್ ತಮ್ಮ ರಾಜೀನಾಮೆ ನೀಡುವುದೂ ಸೇರಿದಂತೆ ಕುಸ್ತಿಪಟುಗಳ ಬೇಡಿಕೆಗಳನ್ನು ಈಡೇರಿಸು ವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಎರಡು ದಿನಗಳಿಂದ ನಡೆಸುತ್ತಿದ್ದ ಧರಣಿಯನ್ನ ಕೈಬಿಟ್ಟಿದ್ದಾರೆ.

ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ರವಿ ದಹಿಯಾ ಸೇರಿದಂತೆ ಹಲವು ಕುಸ್ತಿಪಟುಗಳು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಶುಕ್ರವಾರ ರಾತ್ರಿ ಎರಡನೇ ಸುತ್ತಿನ ಮಾತುಕತೆಯ ನಡೆಸಿದರು. ಇನ್ನೂ ಮಾತುಕತೆ ವೇಳೆ ಸರ್ಕಾರ ಹೋರಾಟಗಾರರ ದೂರುಗಳನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದೆ.

ಅದೇ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೊನೆಗೊಳಿಸಲು ಹೋರಾಟಗಾರರು ನಿರ್ಧರಿಸಿದರು.

ಮೇಲುಸ್ತುವಾರಿ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ. ಸಮಿತಿ ನಾಲ್ಕು ವಾರಗಳಲ್ಲಿ ತನಿಖೆ ಪೂರ್ಣಗೊಳಿಸಲಿದೆ ಎಂದು ಅನುರಾಗ್ ಠಾಕೂರ್ ಮ್ಯಾರಥಾನ್ ಸಭೆ ಬಳಿಕ ಹೇಳಿದ್ದಾರೆ.