ನವದೆಹಲಿ: ಬರ ಪರಿಹಾರ ಕುರಿತಾದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, “ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂ ಕೋರ್ಟ್ಗೆ ಬರಬೇಕಾ?” ಎಂದು ಖಾರವಾಗಿ ಪ್ರಶ್ನಿಸಿತು. ಇದಕ್ಕೆ, “ಎರಡು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ” ಎಂದು ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ ವಕೀಲ ಎಸ್‌ಜಿ ಮೆಹ್ತಾ ಕೋರ್ಟ್ ತಿಳಿಸಿದರು.
ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ.
ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಡಿಸೆಂಬರ್ನಲ್ಲೇ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದೆ ಎಂದು ಹೇಳಿದರು.
ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಮಹಾನ್ ಸುಳ್ಳುಗಾರರು. ಕರ್ನಾಟಕ ತಡವಾಗಿ ಅರ್ಜಿ ಸಲ್ಲಿಸಿತು ಎಂದು ಅಮಿತ್ ಶಾ ಹೇಳಿದರು. ಆ ವಾದವನ್ನು ಅಮಿತ್ ಶಾ ಕೋರ್ಟ್ ಮುಂದೆ ಮಂಡಿಸಬೇಕು. ಅಮಿತ್ ಶಾ ರಾಜ್ಯಕ್ಕೆ ಬಂದು ಭಾಷಣ ಮಾಡುವು ದಲ್ಲ, ಅಫಿಡವಿಟ್ ಸಲ್ಲಿಸಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ಮಾಡಿದರು.