Thursday, 12th December 2024

58ನೇ ಹುಟ್ಟುಹಬ್ಬ ಆಚರಿಸಿದ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ತಮ್ಮ 58 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೇರದಂತೆ ಹಲವಾರು ಗಣ್ಯರು ಶುಭಾಶಯ ಕೋರಿದರು.

ಭಾರತದ ಗೃಹ ಸಚಿವರಾಗಿ ಅಮಿತ್‌ ಶಾ ರಾಷ್ಟ್ರದ ಪ್ರಗತಿಗೆ ಹಲವಾರು ಅತ್ಯು ತ್ತಮ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅವರು ದೇಶಸೇವೆಯಲ್ಲಿ ದೀರ್ಘ ಕಾಲ ತೊಡಗುವಂತಾಗಲಿ, ಆರೋಗ್ಯಕರ ಜೀವನವನ್ನು ನಡೆಸಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಹಲವಾರು ಇತರ ಭಾರತೀಯ ಜನತಾ ಪಕ್ಷದ ನಾಯಕರು ಗೃಹಸಚಿವರ ಜನ್ಮದಿನದಂದು ಶುಭಾಶಯ ಕೋರಿದ್ದಾರೆ.

ಭಾರತದ ಆಂತರಿಕ ಭದ್ರತೆ ಬಲಪಡಿಸಲು ಶಾ ಅವರು ಸಮರ್ಪಿತ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ಅವರಿಗೆ ವಹಿಸ ಲಾದ ಪ್ರತಿಯೊಂದು ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.