ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಮೂರು ದಿನಗಳ ಭೇಟಿ ನೀಡಲಿದ್ದಾರೆ.
11 ನಾಗರಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪಂಚಾಯತ್ ಸದಸ್ಯರು ಹಾಗೂ ರಾಜಕೀಯ ಕಾರ್ಯಕರ್ತ ರನ್ನು ಉದ್ದೇಶಿಸಿ ಈ ತಿಂಗಳು ಪ್ರದೇಶದಲ್ಲಿ ಸಭೆ ನಡೆಸಲಿದ್ದಾರೆ. ಆಗಸ್ಟ್ 2019 ರಲ್ಲಿ ಸಂವಿಧಾನದ 370 ನೇ ವಿಧಿ ರದ್ದುಗೊಳಿಸಿದ ನಂತರ ಷಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು.
ಜಮ್ಮು ಮತ್ತು ಕಾಶ್ಮೀರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುನಿಲ್ ಶರ್ಮಾ ಅವರು, ಶಾ ಅವರು ಶ್ರೀನಗರಕ್ಕೆ ಆಗಮಿಸುತ್ತಾರೆ ಮತ್ತು ನಂತರ ಜಮ್ಮುವಿಗೆ ಪ್ರಯಾಣಿಸುತ್ತಾರೆ ಎಂದು ಹೇಳಿದರು. ಗೃಹ ಸಚಿವರು ಜಮ್ಮುವಿನಲ್ಲಿ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ .’ ಎಂದು ಅವರು ಶಾ ಭೇಟಿಯ ಬಿಜೆಪಿ ಸಭೆಯಲ್ಲಿ ಭಾಗ ವಹಿಸಿದ ನಂತರ ಹೇಳಿದರು.
ಕಣಿವೆಯಾದ್ಯಂತ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದೆ. ಇತ್ತೀಚಿನ ಹಂತದ ಹಿಂಸಾಚಾರದ ನಡುವೆ ಕಣಿವೆಯ 10 ಗುಂಡಿನ ಕಾಳಗದಲ್ಲಿ ಭದ್ರತಾ ಪಡೆಗಳು 17 ಭಯೋತ್ಪಾದಕರನ್ನು ತಟಸ್ಥಗೊಳಿಸಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ಹೇಳಿದರು.