Saturday, 23rd November 2024

ವಹಿವಾಟು ಮುಕ್ತಾಯ: ಷೇರುಪೇಟೆ ಸಂವೇದಿ ಸೂಚ್ಯಂಕ 164 ಅಂಕ ಇಳಿಕೆ

ಮುಂಬೈ: ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ ಗುರುವಾರ 164 ಅಂಕಗಳಷ್ಟು ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಇದರ ಪರಿಣಾಮ, ಇನ್ಫೋಸಿಸ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ನಷ್ಟ ಅನುಭವಿಸಿದೆ.

ಮುಂಬೈ ಷೇರುಪೇಟೆಯ ಬಿಎಸ್ಇ ಸೆನ್ಸೆಕ್ಸ್ 164. 11 ಅಂಕಗಳಷ್ಟು ಇಳಿಕೆಯಾಗಿ, 52,318.60 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಎನ್ ಎಸ್ ಇ ನಿಫ್ಟಿ 41.50 ಅಂಕಗಳಷ್ಟು ಕುಸಿತ ಕಂಡಿದೆ. ಸೆನ್ಸೆಕ್ಸ್ ಇಳಿಕೆಯ ಪರಿಣಾಮ ಬಜಾಜ್ ಫಿನ್ ಸರ್ವ್, ಇನ್ಫೋಸಿಸ್, ಟೆಕ್ ಮಹೀಂದ್ರ, ಆಲ್ಟ್ರಾ ಟೆಕ್ ಸಿಮೆಂಟ್ ಮತ್ತು ಇಂಡಸ್ ಇಂಡ್ ಬ್ಯಾಂಕ್ ಷೇರುಗಳು ಭಾರೀ ನಷ್ಟ ಕಂಡಿದೆ. ಮತ್ತೊಂದೆಡೆ ಡಾ.ರೆಡ್ಡೀಸ್, ಬಜಾಜ್ ಆಟೋ, ಸನ್ ಪಾರ್ಮಾ, ಏಷ್ಯನ್ ಪೇಂಟ್ಸ್ ಮತ್ತು ಎನ್ ಟಿಪಿಸಿ ಷೇರುಗಳು ಲಾಭಗಳಿಸಿದೆ.