Saturday, 14th December 2024

ಮುಂಬೈ ಷೇರುಪೇಟೆ: ಲಾಭದ ವಹಿವಾಟು ಕಂಡ ಸೂಚ್ಯಂಕ

ಮುಂಬೈ: ಜಾಗತಿಕ ಷೇರುಮಾರುಕಟ್ಟೆಯ ಧನಾತ್ಮಕ ವಹಿವಾಟಿನಿಂದ ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ 359 ಅಂಕಗಳಷ್ಟು ಏರಿಕೆಯೊಂದಿಗೆ ಗುರುವಾರ ವಹಿವಾಟನ್ನು ಮುಕ್ತಾಯಗೊಳಿಸಿದೆ.

ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ 52,300.47 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಎನ್ ಎಸ್ ಇ ನಿಫ್ಟಿ 102,40 ಅಂಕಗಳ ಏರಿಕೆಯೊಂದಿಗೆ 15,737.75ರ ಗಡಿ ದಾಟಿದೆ.

ಸೆನ್ಸೆಕ್ಸ್ ಏರಿಕೆಯಿಂದ ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಎಸ್ ಬಿಐ, ಇಂಡಸ್ ಇಂಡ್ ಬ್ಯಾಂಕ್, ಡಾ.ರೆಡ್ಡೀಸ್, ಟೆಕ್ ಮಹೀಂದ್ರಾ, ಐಟಿಸಿ ಮತ್ತು ಕೋಟಕ್ ಬ್ಯಾಂಕ್ ಷೇರುಗಳು ಲಾಭಗಳಿಸಿವೆ.