ಮುಂಬೈ: ಕಚ್ಛಾ ತೈಲ ಬೆಲೆ ಇಳಿಕೆ ಮತ್ತು ವಿದೇಶಿ ಹೂಡಿಕೆದಾರರ ವಹಿವಾಟಿನ ನಡುವೆ ಸೋಮವಾರ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ ಭರ್ಜರಿ ಏರಿಕೆ ಕಂಡಿದೆ.
ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 639.85 ಅಂಕ ಏರಿಕೆಯಾಗಿದ್ದು, 73,728.18 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ, ಎನ್ ಎಸ್ ಇ ನಿಫ್ಟಿ 190.1 ಅಂಕ ಏರಿಕೆಯಾಗಿದ್ದು, 22,337.10 ಅಂಕಗಳ ಗಡಿ ತಲುಪಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಆಲ್ಟ್ರಾಟೆಕ್ ಸಿಮೆಂಟ್, ಆಕ್ಸಿಸ್ ಬ್ಯಾಂಕ್, ಬಜಾಜ್ ಫೈನಾನ್ಸ್, ಲಾರ್ಸನ್ & ಟರ್ಬೊ, ಟಾಟಾ ಸ್ಟೀಲ್ ಮತ್ತು ಟಾಟಾ ಮೋಟಾರ್ಸ್ ಷೇರುಗಳು ಲಾಭಗಳಿಸಿದೆ.
ಎಚ್ ಡಿಎಫ್ ಸಿ ಬ್ಯಾಂಕ್, ಜೆಎಸ್ ಡಬ್ಲ್ಯು ಸ್ಟೀಲ್, ಮಹೀಂದ್ರ ಆಂಡ್ ಮಹೀಂದ್ರ ಮತ್ತು ಐಟಿಸಿ ಷೇರುಗಳು ನಷ್ಟ ಕಂಡಿದೆ. ಇನ್ನು ಸಿಯೋಲ್, ಟೋಕಿಯೊ, ಹಾಂಗ್ ಕಾಂಗ್ ಷೇರುಪೇಟೆ ಸೆನ್ಸೆಕ್ಸ್ ಏರಿಕೆಯಲ್ಲಿದೆ. ಶಾಂಘೈ ಷೇರುಪೇಟೆ ಸೆನ್ಸೆಕ್ಸ್ ಇಳಿಕೆಯಾಗಿರುವುದಾಗಿ ವರದಿ ತಿಳಿಸಿದೆ.