Sunday, 8th September 2024

ಸೆ.30 ರಂದು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಶಶಿ ತರೂರ್ ನಾಮಪತ್ರ ಸಲ್ಲಿಕೆ

ನವದೆಹಲಿ : ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂಸದ ಶಶಿ ತರೂರ್ ಅವರು ಸೆ. 30 ರಂದು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ತಮ್ಮ ಉಮೇದುವಾರಿಕೆ ಘೋಷಿಸಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಪಕ್ಷದ ಮುಖ್ಯಸ್ಥರ ಹುದ್ದೆಯ ಸ್ಪರ್ಧೆಗೆ ಕಾಂಗ್ರೆಸ್ ಸಿದ್ಧವಾಗಿದೆ.

ತರೂರ್ ಅವರು ವಿವಿಧ ರಾಜ್ಯಗಳ ಪ್ರತಿನಿಧಿಗಳನ್ನು ಸಂಪರ್ಕಿಸುತ್ತಿದ್ದು, ಐದು ಸೆಟ್ ನಾಮನಿರ್ದೇಶನ ಪತ್ರಗಳನ್ನು ತೆಗೆದು ಕೊಂಡಿದ್ದಾರೆ. ಇದಕ್ಕಾಗಿ ಅವರಿಗೆ ತಮ್ಮ ಉಮೇ ದುವಾರಿಕೆಗೆ 50 ಪ್ರತಿನಿಧಿಗಳ ಅಗತ್ಯವಿದೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದಿರಲು ನಿರ್ಧರಿಸಿದ ನಂತರ, 24 ವರ್ಷಗಳ ನಂತರ ಗಾಂಧಿಯೇತರರು ಕಾಂಗ್ರೆಸ್ ಅಧ್ಯಕ್ಷ ಸ್ತಾನದ ಚುಕ್ಕಾಣಿ ಹಿಡಿಯಲಿದ್ದಾರೆ.

2017 ಮತ್ತು 2019 ರ ನಡುವಿನ ಎರಡು ವರ್ಷಗಳನ್ನು ಹೊರತುಪಡಿಸಿ 1998 ರಿಂದ ರಾಹುಲ್ ಗಾಂಧಿಯವರಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು.

24 ವರ್ಷಗಳ ನಂತರ ಪಕ್ಷವು ತನ್ನ ಮೊದಲ ಗಾಂಧಿಯೇತರ ಅಧ್ಯಕ್ಷರನ್ನು ಹೊಂದಲಿದೆ.

error: Content is protected !!