ಸದ್ಯ ನ್ಯಾಯಾಂಗ ಬಂಧನದಲ್ಲಿರುವ 28 ವರ್ಷದ ಶೀಜನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್.ಡಿ.ದೇಶಪಾಂಡೆ ಅವರು, 1,00,000 ರೂ. ಶ್ಯೂರಿಟಿ ಮೇಲೆ ಆರೋಪಿಗೆ ಜಾಮೀನು ನೀಡಿದ್ದಾರೆ. ನಟನಿಗೆ ಪಾಸ್ ಪೋರ್ಟ್ ಒಪ್ಪಿಸುವಂತೆ ಕೋರ್ಟ್ ಆದೇಶ ನೀಡಿದ್ದು, ನ್ಯಾಯಾಲಯ ದಿಂದ ಪೂರ್ವಾನುಮತಿ ಪಡೆಯದೆ ದೇಶ ತೊರೆಯದಂತೆ ಸೂಚಿಸಿದೆ.
ವಕೀಲರಾದ ಶೈಲೇಂದ್ರ ಮಿಶ್ರಾ ಮತ್ತು ಶರದ್ ರೈ ಅವರು ಆರೋಪಿ ಶೀಜನ್ ಖಾನ್ ಪರವಾಗಿ ವಾದಿಸಿದ್ದರು. ಡಿಸೆಂಬರ್ 24, 2022 ರಂದು ಪಾಲ್ಘರ್ನ ವಾಲಿವ್ ಬಳಿ ಟಿವಿ ಧಾರಾವಾಹಿಯ ಸೆಟ್ನಲ್ಲಿ ತುನಿಶಾ ಶರ್ಮಾ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಶರ್ಮಾ ಅವರ ತಾಯಿ ನೀಡಿದ ದೂರಿನ ಆಧಾರದ ಮೇಲೆ ನಟ ಶೀಜನ್ ಖಾನ್(28) ಅವರನ್ನು ಮರುದಿನ ಬಂಧಿಸಲಾಗಿತ್ತು.