ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಜೈಲಿನಿಂದಲೇ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕಾಶ್ಮೀರಿ ನಾಯಕ ಶೇಖ್ ಅಬ್ದುಲ್ ರಶೀದ್ (Sheikh Abdul Rashid) ಅಲಿಯಾಸ್ ಎಂಜಿನಿಯರ್ ರಶೀದ್‌ಗೆ ಜಾಮೀನು ಮಂಜೂರಾಗಿದೆ. ರಶೀದ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದಿಲ್ಲಿಯ ಪಟಿಯಾಲ ಹೌಸ್ ಕೋರ್ಟ್ ಮಧ್ಯಂತರ ಜಾಮೀನು(interim bail) ನೀಡಿ ಆದೇಶ ಹೊರಡಿಸಿದೆ.
ಉಗ್ರರಿಗೆ ಹಣಕಾಸಿನ ಸಹಾಯ ಪ್ರಕರಣದಲ್ಲಿ ಜೈಲುಪಾಲಾಗಿರುವ ಶೇಖ್ ರಶೀದ್‌ಗೆ ಅ.2ರವರೆಗೆ ಜಾಮೀನು ನೀಡಿ ಕೋರ್ಟ್‌ಮಹತ್ವದ ಆದೇಶ ಹೊರ ಹಾಕಿದೆ. 2 ಲಕ್ಷ ರೂ. ಬಾಂಡ್ ಆಧಾರದಲ್ಲಿ ಷರತ್ತು ಬದ್ಧ ಜಾಮೀನು ನೀಡಿದೆ. ಆ ಮೂಲಕ ಅವರು ಮುಂಬರುವ ಜಮ್ಮು-ಕಾಶ್ಮೀರ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.
#BREAKING: Pro-Separtist Jailed MP of Baramulla Engineer Rashid has been granted interim bail by a Delhi NIA Court till Oct 2. Rashid will have to give a personal bond of ₹2 lakh apart from other conditions imposed. Rashid will be now campaign in Jammu & Kashmir elections. pic.twitter.com/TGYjJ9rvav
— Aditya Raj Kaul (@AdityaRajKaul) September 10, 2024
2017 ರ ಭಯೋತ್ಪಾದಕರಿಗೆ ಹಣಸಹಾಯ ಮಾಡಿದ ಪ್ರಕರಣದಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಲ್ಪಟ್ಟ ನಂತರ ರಶೀದ್ 2019 ರಿಂದ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾನೆ. ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದ ಸಂಸದ ಶೇಖ್ ರಶೀದ್ ಅಲಿಯಾಸ್ ಇಂಜಿನಿಯರ್ ರಶೀದ್ ಅವರಿಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಅಕ್ಟೋಬರ್ 2 ರವರೆಗೆ ಮಧ್ಯಂತರ ಜಾಮೀನು ನೀಡಿದೆ.
ಅವಾಮಿ ಇತ್ತೆಹಾದ್ ಪಕ್ಷದ ಮುಖ್ಯಸ್ಥ, ಎರಡು ಬಾರಿ ಶಾಸಕನಾಗಿದ್ದ ರಶೀದ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) 2019 ರಲ್ಲಿ ಭಯೋತ್ಪಾದನೆ-ಧನಸಹಾಯ ಚಟುವಟಿಕೆಗಳ ಆರೋಪದ ಮೇಲೆ ಬಂಧಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಆತ ನ್ಯಾಷನಲ್ ಕಾನ್ಫರೆನ್ಸ್‌ನ ಓಮರ್ ಅಬ್ದುಲ್ಲಾ ವಿರುದ್ಧ ಸ್ಪರ್ಧಿಸಿ 4,7,2481 ಮತಗಳನ್ನು ಗಳಿಸಿದ್ದಾನೆ. ಒಮ್ಮೆಯೂ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡದ ರಶೀದ್ 2,04,142 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದ.
ಈ ಸುದ್ದಿಯನ್ನೂ ಓದಿ: Terror attack: ಜಮ್ಮು-ಕಾಶ್ಮೀರ ಎನ್‌ಕೌಂಟರ್- ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ