ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮಹಾನಗರ ಪಾಲಿಕೆಯ ಮೇಯರ್ ಆಗಿ ಆಮ್ ಆದ್ಮಿ ಪಕ್ಷದ ಶೆಲ್ಲಿ ಒಬೆರಾಯ್ ಬುಧವಾರ ಮತ್ತೊಂದು ಅವಧಿಗೆ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿ ದ್ದಾರೆ.
ಬಿಜೆಪಿ ಮೇಯರ್ ಅಭ್ಯರ್ಥಿಯಾಗಿದ್ದ ಶಿಖಾ ರಾಯ್ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ಜೊತೆಗೆ ಉಪ ಮೇಯರ್ ಬಿಜೆಪಿ ಅಭ್ಯರ್ಥಿ ಸೋನಿ ಪಾಲ್ ಕೂಡ ತಮ್ಮ ಉಮೇದುವಾರಿಕೆಯನ್ನು ವಾಪಸ್ ಪಡೆದಿದ್ದಾರೆ. ಇದರಿಂದ ಆಪ್ನ ಆಲೆ ಮೊಹಮ್ಮದ್ ಇಕ್ಬಾಲ್ ಉಪ ಮೇಯರ್ ಆಗಿ ಆಯ್ಕೆಗೊಂಡಿದ್ದಾರೆ.
ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ)ನಲ್ಲಿ ಆಮ್ ಆದ್ಮಿ ಪಕ್ಷ ಆಡಳಿತ ಪಕ್ಷವಾಗಿದ್ದು, 132 ಕಾರ್ಪೊರೇಟರ್ಗಳನ್ನು ಹೊಂದಿದೆ. ಮತ್ತೊಂದೆಡೆ, ಬಿಜೆಪಿ 106 ಕಾರ್ಪೊರೇಟರ್ಗಳನ್ನು ಹೊಂದಿದ್ದರೆ, ಕಾಂಗ್ರೆಸ್ನ 9 ಕಾರ್ಪೊರೇಟರ್ಗಳು ಹಾಗೂ ಮೂವರು ಸ್ವತಂತ್ರ ಕಾರ್ಪೊರೇಟರ್ಗಳು ಇದ್ದಾರೆ.