Sunday, 15th December 2024

ಶೆಲ್ಲಿ ಒಬೆರಾಯ್ ಮೇಯರ್ ಆಗಿ ಅವಿರೋಧವಾಗಿ ಆಯ್ಕೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮಹಾನಗರ ಪಾಲಿಕೆಯ ಮೇಯರ್​ ಆಗಿ ಆಮ್​ ಆದ್ಮಿ ಪಕ್ಷದ ಶೆಲ್ಲಿ ಒಬೆರಾಯ್ ಬುಧವಾರ ಮತ್ತೊಂದು ಅವಧಿಗೆ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿ ದ್ದಾರೆ.

ಬಿಜೆಪಿ ಮೇಯರ್ ಅಭ್ಯರ್ಥಿಯಾಗಿದ್ದ ಶಿಖಾ ರಾಯ್​ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ಜೊತೆಗೆ ಉಪ ಮೇಯರ್​ ಬಿಜೆಪಿ ಅಭ್ಯರ್ಥಿ ಸೋನಿ ಪಾಲ್ ಕೂಡ ತಮ್ಮ ಉಮೇದುವಾರಿಕೆಯನ್ನು ವಾಪಸ್​ ಪಡೆದಿದ್ದಾರೆ. ಇದರಿಂದ ಆಪ್​ನ ಆಲೆ ಮೊಹಮ್ಮದ್ ಇಕ್ಬಾಲ್ ಉಪ ಮೇಯರ್​ ಆಗಿ ಆಯ್ಕೆಗೊಂಡಿದ್ದಾರೆ.

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್​ (ಎಂಸಿಡಿ)ನಲ್ಲಿ ಆಮ್ ಆದ್ಮಿ ಪಕ್ಷ ಆಡಳಿತ ಪಕ್ಷವಾಗಿದ್ದು, 132 ಕಾರ್ಪೊರೇಟರ್‌ಗಳನ್ನು ಹೊಂದಿದೆ. ಮತ್ತೊಂದೆಡೆ, ಬಿಜೆಪಿ 106 ಕಾರ್ಪೊರೇಟರ್‌ಗಳನ್ನು ಹೊಂದಿದ್ದರೆ, ಕಾಂಗ್ರೆಸ್​ನ 9 ಕಾರ್ಪೊರೇಟರ್‌ಗಳು ಹಾಗೂ ಮೂವರು ಸ್ವತಂತ್ರ ಕಾರ್ಪೊರೇಟರ್‌ಗಳು ಇದ್ದಾರೆ.