Thursday, 12th December 2024

ಶಿವಸೇನಾ ಸಂಸದರ ಬಂಗಲೆ ಮೇಲೆ ಸೋಡಾ ಬಾಟಲಿ ಎಸೆತ

ಮುಂಬೈ: ಅಪರಿಚಿತ ದುಷ್ಕರ್ಮಿಗಳು ಶಿವಸೇನಾ ಸಂಸದ ವಿನಾಯಕ್ ರಾವತ್ ಅವರ ಬಂಗಲೆ ಮೇಲೆ ಸೋಡಾ ನೀರಿನ ಬಾಟಲಿಗಳನ್ನು ಎಸೆದ ಘಟನೆ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮುಂಬೈಯಿಂದ 500 ಕಿ.ಮೀ ದೂರದಲ್ಲಿರುವ ಮಾಳವನ್ ನ ಕರಾವಳಿ ಪ್ರದೇಶ ರೌತವಾಡಿಯಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದೆ ಎಂದಿದ್ದಾರೆ.

ನಾಲ್ವರು ಅಪರಿಚಿತರು ರವಾತ್ ಬಂಗಲೆ ಮೇಲೆ ಸೋಡಾ ನೀರಿನ ಬಾಟಲಿ ಎಸೆದು ಪರಾರಿಯಾಗಿದ್ದಾರೆ. ಬಂಗಲೆ ನಿರ್ವಹಣೆ ಮಾಡುತ್ತಿದ್ದವರು ನೀಡಿದ ದೂರಿನ ಆಧಾರದ ಮೇಲೆ ಅಪರಿಚಿತರ ವಿರುದ್ದ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದುಷ್ಕರ್ಮಿಗಳ ಬಂಧನಕ್ಕೆ ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಹೇಳಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ಕುರಿತಾಗಿ, ಕೇಂದ್ರ ಸಚಿವ ನಾರಾಯಣ್ ರಾಣೆ ಅವರನ್ನು ಕೇಂದ್ರ ಸಂಪುಟದಿಂದ ವಜಾಗೊಳಿಸ ಬೇಕೆಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.