ನವದೆಹಲಿ: ಸಂಸತ್ ಭವನದಲ್ಲಿರುವ ಶಿವಸೇನೆ ಕಚೇರಿಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಹಂಚಿಕೆ ಮಾಡಲಾಗಿದೆ ಎಂದು ಲೋಕಸಭೆ ಸಚಿವಾಲಯ ಮಂಗಳವಾರ ತಿಳಿಸಿದೆ.
ಶುಕ್ರವಾರ ಚುನಾವಣಾ ಆಯೋಗವು ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ನಿಜವಾದ ಶಿವಸೇನೆ ಎಂದು ಗುರುತಿಸಿ ಅದಕ್ಕೆ “ಬಿಲ್ಲು ಮತ್ತು ಬಾಣ”ದ ಚಿಹ್ನೆ ನೀಡಿ ಆದೇಶಿಸಿತ್ತು.
ಚುನಾವಣಾ ಆಯೋಗದ ಈ ಆದೇಶ ‘ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ’ ಎಂದಿದ್ದ ಉದ್ಧವ್ ಠಾಕ್ರೆ ಅವರು, ಇಸಿ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ. ಉದ್ಧವ್ ಠಾಕ್ರೆ ಬಣ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಚಾರಣೆ ನಡೆಸಲಿದೆ.