Saturday, 14th December 2024

ಶೋಪಿಯಾನ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ: ಉಗ್ರರ ಹತ್ಯೆ

ಶ್ರೀನಗರ್: ಕಾಶ್ಮೀರದ ದಕ್ಷಿಣ ಭಾಗದಲ್ಲಿ ಶೋಪಿಯಾನ್ ಜಿಲ್ಲೆಯ ಬಡಿಗಾಮ್ ಗ್ರಾಮದಲ್ಲಿ ಶುಕ್ರವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಮೃತಪಟ್ಟರು.

ಮೃತ ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿವರ ಇನ್ನಷ್ಟೇ ಲಭ್ಯವಾಗಬೇಕಾಗಿದೆ ಎಂದು ವರದಿ ವಿವರಿಸಿದೆ.

ಶೋಪಿಯಾನ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ್ ವಲಯ ಪೊಲೀಸ್ ಅಧಿಕಾರಿಗಳು ಟ್ವೀಟರ್ ನಲ್ಲಿ ತಿಳಿಸಿದ್ದಾರೆ. ಬಡಿಗಾಮ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸೇನೆ, ಪೊಲೀಸರು ಹಾಗೂ ಸಿಆರ್ ಪಿಎ:ಫ್ ಜಂಟಿಯಾಗಿ ಸುತ್ತುವರಿದು, ಕಾರ್ಯಾಚರಣೆ ನಡೆಸಿತ್ತು.