ಸೂರತ್: ಸೂರತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Surat International Airport) ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್ಎಫ್) ಸೇರಿದ ಯೋಧರೊಬ್ಬರು(CISF Jawan) ತಮ್ಮ ಸೇವಾ ಶಸ್ತ್ರಾಸ್ತ್ರದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆಯೊಂದು ವರದಿಯಾಗಿದೆ(Shot Himself)
At Gujarat’s Surat International Airport incident, CISF Jawan Kishan Singh shot himself.He attempted suicide by shooting himself in the stomach with his own gun. The jawan was shifted to a private hospital for treatment& Died during treatment at hospital.@NewIndianXpress pic.twitter.com/ioLvMnVYPL
— Dilip Singh Kshatriya (@Kshatriyadilip) January 4, 2025
ಸಿಐಎಸ್ಎಫ್ ಸಿಬ್ಬಂದಿ,ಕರ್ತವ್ಯ ನಿರತ ಯೋಧರಾದ ಕಿಸಾನ್ ಸಿಂಗ್ (32) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ ಎಂದು ತಿಳಿದು ಬಂದಿದೆ. ಇಂದು(ಜ.4) ಮಧ್ಯಾಹ್ನ 2.10ರ ಸುಮಾರಿಗೆ ವಿಮಾನ ನಿಲ್ದಾಣದ ಶೌಚಾಲಯದಲ್ಲಿ(Washroom) ತಮ್ಮ ಸರ್ವೀಸ್ ರೈಫಲ್‌ನಿಂದ ಹೊಟ್ಟೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿನ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಈವರೆಗೂ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ. ಹಾಗೆ ಭಾರತದಾದ್ಯಂತ ವಿಮಾನ ನಿಲ್ದಾಣಗಳನ್ನು ಭದ್ರಪಡಿಸುವ ಜವಾಬ್ದಾರಿಯನ್ನು ಹೊಂದಿರುವ ಅರೆಸೈನಿಕ ಪಡೆ ಸಿಐಎಸ್ಎಫ್ ಕೂಡ ಈ ವಿಷಯದ ಬಗ್ಗೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ ಎನ್ನಲಾಗಿದೆ.
ಗುಂಡು ಹಾರಿಸಿಕೊಂಡು ಸಿಎಎಫ್ ಯೋಧ ಆತ್ಮಹತ್ಯೆ
ಕೆಲ ದಿನಗಳ ಹಿಂದೆಯಷ್ಟೇ ಛತ್ತೀಸಗಢದ ಸಶಸ್ತ್ರ ಪಡೆಯ (ಸಿಎಎಫ್) ಯೋಧಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದರು. ಮೃತರನ್ನು ಸಿಎಎಫ್‌ನ 14ನೇ ಬೆಟಾಲಿಯನ್‌ಗೆ ಸೇರಿದ ಅನಿಲ್ ಸಿಂಗ್ ಗಹರ್ವಾರ್ ಎಂದು ಗುರುತಿಸಲಾಗಿತ್ತು. ರಾಖಿ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸ್ ಹೆಡ್‌ಕ್ವಾರ್ಟರ್‌ನಲ್ಲಿ ಅನಿಲ್ ತಮ್ಮ ಸರ್ವೀಸ್ ರೈಫಲ್‌ನಿಂದಲೇ ಗುಂಡು ಹಾರಿಸಿಕೊಂಡು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದರು.
ಗುಂಡಿನ ಸದ್ದು ಕೇಳಿ ಆತನ ಸಹೋದ್ಯೋಗಿಗಳು ಸ್ಥಳಕ್ಕೆ ಧಾವಿಸಿದ್ದರು. ಆದರೆ ಅಷ್ಟರ ಹೊತ್ತಿಗೆ ಅನಿಲ್ ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು. ಈ ಘಟನೆ ಕುರಿತು ಅವರ ಕುಟುಂಬದವರಿಗೆ ಮಾಹಿತಿ ನೀಡಲಾಗಿತ್ತು. ಯೋಧನ ಸಾವಿಗೆ ನಿಖರವಾದ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದರು.
ಈ ಸುದ್ದಿಯನ್ನೂ ಓದಿ:Manipur Militants: ಎಲಾನ್ ಮಸ್ಕ್‌ನ ಸ್ಟಾರ್‌ಲಿಂಕ್ ಉಪಕರಣ ಬಳಸುತ್ತಿದ್ದ ಮಣಿಪುರ ಉಗ್ರಗಾಮಿಗಳು