ಮುಂಬೈ: ಮುಂಬೈ ಪೊಲೀಸರು ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ವಿರುದ್ಧ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇದರ ನಡುವೆ ತನಿಖೆಯಲ್ಲಿ ಮತ್ತೊಂದು ಅಂಶ ಬೆಳಕಿಗೆ ಬಂದಿದೆ. 2022ರಲ್ಲಿ ರಾಜಧಾನಿ ದಿಲ್ಲಿಯಲ್ಲಿ ನಡೆದಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ (Shraddha Walker murder case) ಆರೋಪಿ ಅಫ್ತಾಬ್ ಪೂನಾವಾಲಾ ಅವರ ಮೇಲೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕಣ್ಣಿಟ್ಟಿದೆ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ.
2022ರ ಮೇ ತಿಂಗಳಲ್ಲಿ ಶ್ರದ್ಧಾ ವಾಕರ್ ಅವರನ್ನು ದಿಲ್ಲಿಯಲ್ಲಿ ಆಕೆಯ ಗೆಳೆಯ ಅಫ್ತಾಬ್ ಪೂನಾವಾಲಾ ಕೊಲೆ ಮಾಡಿ ಛಿದ್ರಗೊಳಿಸಿದ್ದರು. ಅವರು ತನ್ನ ಗೆಳೆತಿಯ ಮೃತ ದೇಹದ ಭಾಗಗಳನ್ನು ಕತ್ತರಿಸಿ ಫ್ರಿಜ್‌ನಲ್ಲಿ ಇರಿಸಿದ್ದರು. ಈ ಘಟನೆ ಇಡೀ ದೇಶಕ್ಕೆ ಆಘಾತ ನೀಡಿತ್ತು. ಈ ಘಟನೆಗೆ ಕೋಮು ಬಣ್ಣವನ್ನೂ ನೀಡಲಾಗಿದೆ. 2022ರ ನವೆಂಬರ್‌ನಲ್ಲಿ ಈ ವಿಷಯ ಬೆಳಕಿಗೆ ಬಂದ ನಂತರ, ದೆಹಲಿ ಪೊಲೀಸರು ಅಫ್ತಾಬ್ ಅನ್ನು ಬಂಧಿಸಿದ್ದರು. ಅಫ್ತಾಬ್ ಸದ್ಯ ತಿಹಾರ್ ಜೈಲ್‌ನಲ್ಲಿದ್ದಾರೆ ಮತ್ತು ಅವರು ಬಿಷ್ಣೋಯ್ ಗ್ಯಾಂಗ್‌ನ ಗುರಿಯಾಗಿದ್ದಾರೆಂದು ಎಂದು ಮೂಲಗಳು ತಿಳಿಸಿವೆ. ಈ ಮಾಹಿತಿಯನ್ನು ಮಹಾರಾಷ್ಟ್ರ ಎಟಿಎಸ್ ಮತ್ತು ಗುಪ್ತಚರ ಸಂಸ್ಥೆಗಳು ಬಹಿರಂಗಪಡಿಸಿವೆ.
Lawrence Bishnoi: ಜೈಲಿನಲ್ಲಿರೋ ಲಾರೆನ್ಸ್ ಬಿಷ್ಣೋಯ್‌ಗಾಗಿ ಬರೋಬ್ಬರಿ 40 ಲಕ್ಷ ರೂ. ವೆಚ್ಚ
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮೇಲೆ ಬಾಬಾ ಸಿದ್ದಿಕಿ ಹತ್ಯೆಯ ಆರೋಪವಿದೆ. ಈ ಕೊಲೆ ಪ್ರಕರಣದಲ್ಲಿ ಪೊಲೀಸರು ಇದುವರೆಗೆ 24 ಆರೋಪಿಗಳನ್ನು ಬಂಧಿಸಿದ್ದಾರೆ. ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಶುಭಂ ಲೋಂಕರ್ ಮತ್ತು ಜೀಶನ್ ಅಖ್ತರ್ ಇನ್ನೂ ತಲೆಮರೆಸಿಕೊಂಡಿದ್ದಾರೆ. ಈ ಇಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದರುವಾಗ ಶ್ರದ್ಧಾ ವಾಲ್ಕರ್ ಅವರ ಕೊಲೆ ಆರೋಪಿ ಅಫ್ತಾಬ್ ಪೂನಾವಾಲಾ ಮೇಲೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮುಂದಿನ ಗುರಿಯನ್ನು ಹೊಂದಿದೆ ಎಂವ ಅಂಶ ಬೆಳಕಿಗೆ ಬಂದಿದೆ.
ಲಾರೆನ್ಸ್ ಗ್ಯಾಂಗ್‌ನಲ್ಲಿ ಶಸ್ತ್ರಾಸ್ತ್ರ ಪೂರೈಕೆದಾರ ಶುಭಂ ಲೋಂಕರ್
10 ದಿನಗಳಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ನಾಲ್ಕು ಬಾರಿ ಕೊಲೆ ಬೆದರಿಕೆಗಳು ಬಂದಿದ್ದವು. ಮುಂಬೈ ಅಪರಾಧ ವಿಭಾಗವು ಪುಣೆ ಮೂಲದ ಶುಭಂ ಲೋಂಕರ್ ಅವರನ್ನು ಬಂಧಿಸಲು ಭಾರೀ ಪ್ರಯತ್ನ ನಡೆಸುತ್ತಿದೆ. ಮೂಲಗಳ ಪ್ರಕಾರ, ಕಳೆದ ಜನವರಿಯಲ್ಲಿ ಅಕೋಲಾ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಶುಭಂ ಲೋಂಕರ್ ಅವರನ್ನು ಬಂಧಿಸಿದ್ದರು. ಆ ವೇಳೆ ಪೊಲೀಸರು ಶುಭಂ ಲೋಂಕರ್‌ನಿಂದ ಮೂರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದರು.
ಅಕೋಲಾ ಪೊಲೀಸ್ ವರದಿಗಳ ಪ್ರಕಾರ ಶುಭಂ ಲೋಂಕರ್ ಅವರು ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಮತ್ತು ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆ. ಅವರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಶುಭಂ ಲೋಂಕರ್ ಅವರು ಅನ್ಮೋಲ್ ಬಿಷ್ಣೋಯ್ ಅವರನ್ನು ತಮ್ಮ ಮೊಬೈಲ್ ವಾಟ್ಸಾಪ್ ಮೂಲಕ ಸಂಪರ್ಕಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಆ ಮೂಲಕ ಶುಭಂ ಲೋಂಕರ್ ಬಿಷ್ಣೋಯ್ ಗ್ಯಾಂಗ್‌ಗಾಗಿ ಕೆಲಸ ಮಾಡುತ್ತಿದ್ದಾರೆಂಬುದು ಪೊಲೀಸರಿಗೆ ಖಚಿತವಾಗಿತ್ತು.