Saturday, 14th December 2024

ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಜಮ್ಮು : ಗಡಿ ಭದ್ರತಾ ಪಡೆಯ ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಮ್ಮುವಿನ ಭಾರತ ಮತ್ತು ಪಾಕಿಸ್ತಾನದ ಅಂತರರಾಷ್ಟ್ರೀಯ ಗಡಿಯಲ್ಲಿ ನಡೆದಿದೆ.

ರಾಮದೇವ್ ಸಿಂಗ್ ಮೃತ ಅಧಿಕಾರಿ. ಕಿರಿಯ ಸಹೋದ್ಯೋಗಿಯೊಬ್ಬರು ಅವರ ಕೊಠಡಿಗೆ ಹೋದಾಗ ರಾಮದೇವ್ ತಮ್ಮ ಗನ್ ಜೊತೆ ರಕ್ತದ ಮಡುವಿನಲ್ಲಿ ಸತ್ತು ಬಿದ್ದಿರುವುದು ಪತ್ತೆಯಾಗಿದೆ.

ಮೃತ ಎಸ್‌ಐ 12ನೇ ಬೆಟಾಲಿಯನ್‌ಗೆ ಸೇರಿದವರಾಗಿದ್ದು, ಬಿಎಸ್‌ಎಫ್ ಪ್ಲೆಟೋನ್ ಒಂದನ್ನು ಮುನ್ನಡೆಸುತ್ತಿದ್ದರು. ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿರ ಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾವಿನ ಕಾರಣ ಪತ್ತೆಗೆ ಪೊಲೀಸ್ ಮತ್ತು ಬಿಎಸ್‌ಎಫ್ ಕೋರ್ಟ್ ವಿಚಾರಣೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಮೃತ ಎಸ್‌ಐ ರಾಮದೇವ್ ಸಿಂಗ್, ರಾಜಸ್ಥಾನದ ಸಿಕರ್ ಜಿಲ್ಲೆಯವರು.