ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಪಕ್ಕಾ ಆಗಿದ್ದು, ಹೈ ಕಮಾಂಡ್ ನಿಂದ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ಶುರುವಾಗಿದ್ದು, ಈಗಾಗಲೇ ಹಲವು ಸುತ್ತಿನ ಮಾತುಕತೆ ಬಳಿಕ ಹೈಕಮಾಂಡ್ ಸಿದ್ದ ರಾಮಯ್ಯಗೆ ಸಿಎಂ ಸ್ಥಾನ ನೀಡಲು ನಿರ್ಧರಿಸಿದೆ ಎನ್ನಲಾಗಿದೆ. ಮತ್ತೊಂದು ಸಭೆ ನಡೆಸಿ ಹೈಕಮಾಂಡ್ ಸಿದ್ದರಾಮಯ್ಯರನ್ನು ಸಿಎಂ ಮಾಡಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಿದ್ದರಾಮಯ್ಯ ಮನವಿ ಮೇರೆಗೆ ಸೋನಿಯಾ ಗಾಂಧಿ ನಿವಾಸಕ್ಕೆ ಬರುವಂತೆ ಸೂಚನೆ ನೀಡಲಾಗಿದೆ. ನವದೆಹಲಿಯ ಜನಪತ್ ನಲ್ಲಿರುವ ಸೋನಿಯಾ ಗಾಂಧಿ ನಿವಾಸಕ್ಕೆ ತೆರಳಲಿರುವ ಸಿದ್ದರಾಮಯ್ಯ, ಮಧ್ಯಾಹ್ನ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ಮಾತುಕತೆಯ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಸಿದ್ದರಾಮಯ್ಯರನ್ನು ಸಿಎಂ ಎಂದು ಘೋಷಣೆ ಮಾಡಲಿದ್ದಾರೆ.