Sunday, 15th December 2024

ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ

ಚಂಡೀಗಡ: ಕಾಂಗ್ರೆಸ್‌ನ ಪಂಜಾಬ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಬುಧವಾರ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ನೀಡುವಂತೆ ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ, ಮಣಿಪುರ ಹಾಗೂ ಪಂಜಾಬ್‌ ಘಟಕಗಳ ಅಧ್ಯಕ್ಷರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದರು. ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಹೀನಾಯ ಸೋಲಿನ ಬಳಿಕ ಸೋನಿಯಾ ಈ ನಿರ್ಧಾರ ಕೈಗೊಂಡಿದ್ದರು.