ಸಿಕ್ಕಿಂ: ಸಿಕ್ಕಿಂನಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಒಟ್ಟು 32 ವಿಧಾನಸಭಾ ಕ್ಷೇತ್ರಗಳ ಪೈಕಿ 31 ರಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುನ್ನಡೆ ಕಾಯ್ದುಕೊಂಡಿದೆ. ಇದರಲ್ಲಿ 7 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ.
ವಿರೋಧ ಪಕ್ಷ ಎಸ್‌ಡಿಎಫ್ ಕೇವಲ 1 ಕ್ಷೇತ್ರದಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ತಮ್ಮ ಪಕ್ಷ ಗೆಲ್ಲೋದು ಪಕ್ಕಾ ಆಗುತ್ತಿದ್ದಂತೆ ಎಸ್‌ಕೆಎಂ ಕಾರ್ಯಕರ್ತರು ಚುನಾವಣಾ ಆಯೋಗದ ನಿಷೇಧದ ನಡುವೆಯೂ ಪಕ್ಷದ ಬಾವುಟ ಹಿಡಿದು ಸಂಭ್ರಮಿಸುತ್ತಿದ್ದಾರೆ.
ಸಿಕ್ಕಿಂ ಮುಂಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು ಸ್ಪರ್ಧಿಸಿರುವ ಎರಡೂ ಕಡೆ ಮುನ್ನಡೆ ಕಾಯ್ದುಕೊಂಡಿದ್ದಾರೆ. ತಮಾಂಗ್ ಅವರು ರೆನಾಕ್ ಮತ್ತು ಸೊರೆಂಗ್-ಚಕುಂಗ್ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದಾರೆ. ಜೊಂಗು ವಿಧಾನಸಭಾ ಕ್ಷೇತ್ರದಿಂದ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ ಪಿಂಟ್ಸೊ ನಮ್ಗ್ಯಾಲ್ ಲೆಪ್ಚಾ ಅವರು ಗೆಲುವು ಸಾಧಿಸಿದ್ದಾರೆ.
ಸಿಕ್ಕಿ ವಿಧಾನಸಭೆಯಲ್ಲಿ ಬಹುಮತಕ್ಕೆ 17 ಮ್ಯಾಜಿಕ್ ಸಂಖ್ಯೆಯಾಗಿದ್ದು, ಆಡಳಿತ ಪಕ್ಷ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಬರೋಬ್ಬರಿ 31 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಸಿಕ್ಕಿಂನ 32 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದ ಲೋಕಸಭಾ ಚುನಾವಣೆಯ ಜೊತೆಗೆ ಮತದಾನ ನಡೆದಿತ್ತು.