Sunday, 15th December 2024

ಸಿಂಗ್‍ಭೂಮ್: ರೈಲ್ವೆ ಹಳಿಗಳ ಒಂದು ಭಾಗ ಸ್ಪೋಟ, ಸಂಚಾರಕ್ಕೆ ಅಡ್ಡಿ

ಚೈಬಾಸಾ: ನಿಷೇಧಿತ ಸಿಪಿಐ (ಮಾವೋವಾದಿ) ನಕ್ಸಲರು ಜಾರ್ಖಂಡ್‍ನ ಪಶ್ಚಿಮ ಸಿಂಗ್‍ಭೂಮ್ ಜಿಲ್ಲೆಯಲ್ಲಿ ರೈಲ್ವೆ ಹಳಿಗಳ ಒಂದು ಭಾಗವನ್ನು ಸ್ಪೋಟಿಸಿದ್ದಾರೆ. ಇದರಿಂದ ಹೌರಾ-ಮುಂಬೈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 150 ಕಿಮೀ ದೂರದಲ್ಲಿರುವ ಗೋಯಿಲ್ಕೆರಾ ಮತ್ತು ಪೊಸೊಯಿಟಾ ರೈಲು ನಿಲ್ದಾಣಗಳ ನಡುವೆ ಗುರುವಾರ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ ಎಂದು ಪಶ್ಚಿಮ ಸಿಂಗ್‍ಭೂಮ್ ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ತಿಳಿಸಿದ್ದಾರೆ.

ಸ್ಥಳದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ರೈಲು ಹಳಿಗಳ ದುರಸ್ತಿ ಕಾರ್ಯವನ್ನು ಪ್ರಾರಂಭಿಸಲಾಗಿದೆ ಮತ್ತು ಶೀಘ್ರದಲ್ಲೇ ರೈಲು ಸಂಚಾರ ಪುನರಾರಂಭವಾಗಲಿದೆ.

ನಿಷೇತ ಸಂಘಟನೆಯು ಡಿ.16 ರಿಂದ ಪ್ರತಿಭಟನಾ ಸಪ್ತಾಹವನ್ನು ಆಚರಿಸುತ್ತಿದೆ ಮತ್ತು ಇಂದು ಭಾರತ್ ಬಂದ್‍ಗೆ ಕರೆ ನೀಡಿತ್ತು.