Thursday, 25th April 2024

ರಸ್ತೆಬದಿಯ ಬಾವಿಗೆ ಬಿದ್ದ ಕಾರು: ಆರು ಸಾವು, ಮೂವರಿಗೆ ಗಾಯ

ಭೋಪಾಲ್: ಪ್ರಯಾಣಿಸುತ್ತಿದ್ದ ಕಾರು ರಸ್ತೆಬದಿಯ ಬಾವಿಗೆ ಬಿದ್ದ ಪರಿಣಾಮ 6 ಮಂದಿ ಮೃತಪಟ್ಟು ಮೂವರು ಗಾಯ ಗೊಂಡರು. ಮಧ್ಯಪ್ರದೇಶದ ಛತರ್ಪುರ್ ಜಿಲ್ಲೆಯ ಮಹಾರಾಜಪುರ್ ಎಂಬಲ್ಲಿ ಘಟನೆ ನಡೆದಿದೆ.

ಮದುವೆ ಸಮಾರಂಭ ಮುಗಿಸಿಕೊಂಡು ಕಾರಿನಲ್ಲಿ ಬರುತ್ತಿದ್ದ ವೇಳೆ ದುರ್ಘಟನೆ ನಡೆದಿದ್ದು, ರಾತ್ರಿ ವೇಳೆ ಕಾರು ಚಲಾಯಿಸು ತ್ತಿದ್ದವರು ನಿಯಂತ್ರಣ ತಪ್ಪಿ ಬಾವಿಗೆ ಬಿದ್ದಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.

ಕಾರಿನಲ್ಲಿ 9 ಮಂದಿ ಇದ್ದರು, ಅವರಲ್ಲಿ 6 ಮಂದಿ ಮೃತಪಟ್ಟಿದ್ದು ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಹಾರಾಜ್ ಪುರ್ ಪೊಲೀಸ್ ಠಾಣೆಯ ಉಸ್ತುವಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!