Sunday, 15th December 2024

ರಾಜ್ಯಸಭೆಯಲ್ಲಿ ಗದ್ದಲ: ಆರು ಸಂಸದರ ಅಮಾನತು

ನವದೆಹಲಿ: ಇಸ್ರೇಲಿನ ಪೆಗಾಸಸ್ ತಂತ್ರಾಂಶ ಬಳಸಿ ಬೇಹುಗಾರಿಕೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಗದ್ದಲ ಸೃಷ್ಟಿಸಿದ ತೃಣಮೂಲ ಕಾಂಗ್ರೆಸ್ ಪಕ್ಷದ ಆರು ಸಂಸದರನ್ನು ಅಮಾನತುಗೊಳಿಸಲಾಗಿದೆ. ಆ.13ರವರೆಗೂ ನಡೆಯಲಿರುವ ಮುಂಗಾರು ಅಧಿವೇಶನದಿಂದ ದೂರ ಇರುವಂತೆ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಸೂಚನೆ ನೀಡಿದ್ದಾರೆ.

ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಕುರ್ಚಿಗಳನ್ನು ಎಳೆದಾಡಿ, ನಾಮಫಲಕಗಳನ್ನು ಪ್ರದರ್ಶಿಸುತ್ತಾ ಗದ್ದಲ ಸೃಷ್ಟಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಡೋಲಾ ಸೇನ್, ಮೊಹಮ್ಮದ್ ನಬೀಮುಲ್, ಅಬಿರ್ ರಂಜನ್ ಬಿಸ್ವಾಸ್, ಶಾಂತ ಛೆತ್ರಿ, ಅರ್ಪಿತಾ ಘೋಷ್, ಮೌಸಮ್ ನೂರ್ ಮುಂತಾದವರನ್ನು ಅಮಾನತುಗೊಳಿಸಲಾಗಿದೆ.

ರಾಜ್ಯಸಭೆ ಕಲಾಪದ ಸಂದರ್ಭದಲ್ಲಿ ಆರು ಮಂದಿ ಟಿಎಂಸಿ ಸಂಸದರ ನಡವಳಿಕೆ ಸರಿಯಾಗಿರಲಿಲ್ಲ.