Saturday, 14th December 2024

ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಎಸ್‌ಕೆಎಂನ ಪ್ರೇಮ್ ಸಿಂಗ್ ತಮಾಂಗ್

ಗ್ಯಾಂಗ್‌ಟಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಪ್ರೇಮ್ ಸಿಂಗ್ ತಮಾಂಗ್ ಸೋಮವಾರ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಸಿಎಂ ಅಧಿಕೃತ ನಿವಾಸದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಸ್‌ಕೆಎಂ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಪ್ರೇಮ್ ಸಿಂಗ್ ತಮಾಂಗ್ ಅವರು ಇಂದು ಪಕ್ಷದ ನೂತನ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ರಾಜ್ಯಪಾಲರು ಎಲ್ಲಾ ಶಾಸಕರಿಗೆ ಅಭಿನಂದಿಸಿ ಶುಭ ಹಾರೈಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡನೇ ಬಾರಿ ಸಿಕ್ಕಿಂ ಮುಖ್ಯಮಂತ್ರಿಯಾಗುತ್ತಿರುವ ಪ್ರೇಮ್ ಸಿಂಗ್ ತಮಾಂಗ್ ಅವರು ಯಾವಾಗ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂಬುದು ತಕ್ಷಣಕ್ಕೆ ತಿಳಿದು ಬಂದಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಏಪ್ರಿಲ್ 18 ರಂದು ನಡೆದ ಸಿಕ್ಕಿಂ ವಿಧಾನಸಭೆ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(SKM) 32 ಸದಸ್ಯ ಬಲದ ವಿಧಾನಸಭೆಯಲ್ಲಿ 31 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ.