Friday, 22nd November 2024

Air India : ತಿರುವನಂತಪುರಂನಿಂದ ಮಸ್ಕತ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹೊಗೆ

Air India

ಬೆಂಗಳೂರು: ಕೇರಳದ ತಿರುವನಂತಪುರಂನಿಂದ ಒಮಾನ್ ನ ಮಸ್ಕತ್‌ಗೆ ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ (Air India) ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಗಿದೆ. , ಐಎಕ್ಸ್ 549 ವಿಮಾನವು ರನ್‌ವೇನಲ್ಲಿ ಚಲಿಸಲು ಪ್ರಾರಂಭಿಸಿದ ಕೂಡಲೇ ಹೊಗೆ ಕಾಣಿಸಿತು. ಕ್ಯಾಬಿನ್ ಸಿಬ್ಬಂದಿ ಹೊಗೆಯನ್ನು ನೋಡಿ ಅಸಾಮಾನ್ಯ ವಾಸನೆಯನ್ನು ಗಮನಿಸಿದರು. ಬೆಳಿಗ್ಗೆ 10.30ರ ಸುಮಾರಿಗೆ ಈ ಘಟನೆ ವರದಿಯಾಗಿದೆ. ವಿಮಾನದಲ್ಲಿ 142 ಪ್ರಯಾಣಿಕರಿದ್ದರು. ತಕ್ಷಣ ವಿಮಾನ ನಿಲ್ಲಿಸಿ ಪ್ರಯಾಣಿಕರನ್ನು ಕೆಳಕ್ಕೆ ಇಳಿಸಲಾಯಿತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಈ ಘಟನೆಯನ್ನು ಒಪ್ಪಿಕೊಂಡಿದೆ . ಪ್ರಯಾಣಿಕರಿಗೆ ಪರ್ಯಾಯ ವಿಮಾನ ವ್ಯವಸ್ಥೆ ಮಾಡಲಾಗಿದೆ. ತನಿಖೆಯನ್ನು ಕೈಗೊಳ್ಳಲಾಗುವುದು ಎಂದು ವಿಮಾನ ಯಾನ ಸಂಸ್ಥೆಯು ಹೇಳಿಕೊಂಡಿದೆ.

ಇದನ್ನೂ ಓದಿ: Caste Sub-Classification : ಒಳಮೀಸಲಾತಿ ತೀರ್ಪು ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಟೇಕ್ ಆಫ್ ಸಮಯದಲ್ಲಿ ಕಂಡುಬಂದ ಹೊಗೆಯಿಂದಾಗಿ, ನಮ್ಮ ವಿಮಾನವೊಂದು ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಮತ್ತೆ ಬೇಗೆ ಮರಳಿತು.ಪ್ರಯಾಣಿಕರಿಗೆ ಪರ್ಯಾಯ ವಿಮಾನ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿಕೊಂಡಿದೆ.

ಸಮಸ್ಯೆಯ ನಿಖರ ಸ್ವರೂಪ ನಿರ್ಧರಿಸಲು ತನಿಖೆ ನಡೆಸಲಾಗುವುದು” ಎಂದು ಅದು ಹೇಳಿದೆ. “ನಮ್ಮ ಕಾರ್ಯಾಚರಣೆಯ ಪ್ರತಿಯೊಂದು ಅಂಶದಲ್ಲೂ ಸುರಕ್ಷತೆಗೆ ಆದ್ಯತೆ ನೀಡುತ್ತೇವೆ. ಆದಾಗ್ಯೂ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ” ಎಂದು ವಿಮಾನಯಾನ ಹೇಳಿಕೆಯಲ್ಲಿ ತಿಳಿಸಲಾಗಿದೆ.