Wednesday, 11th December 2024

ಸ್ನೂಪಿಂಗ್ ಪ್ರಕರಣ: ಸಿಸೋಡಿಯಾ ಸೇರಿ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲು

ವದೆಹಲಿ: ಕೇಂದ್ರೀಯ ತನಿಖಾ ದಳ (ಸಿಬಿಐ) ಸ್ನೂಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಏಳು ಜನರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಿಸೋಡಿಯಾ ಅವರನ್ನು ದೀರ್ಘಕಾಲದವರೆಗೆ ಜೈಲಿನಲ್ಲಿಡಲು ಇದು ಪ್ರಧಾನಿಯ ಯೋಜನೆಯಾಗಿದೆ ಎಂದು ಆರೋಪಿಸಿದ್ದಾರೆ.

‘ಮನೀಷ್ ವಿರುದ್ಧ ಹಲವು ಸುಳ್ಳು ಪ್ರಕರಣಗಳನ್ನು ದಾಖಲಿಸಿ ಸುದೀರ್ಘ ಅವಧಿಗೆ ಕಸ್ಟಡಿಯಲ್ಲಿ ಇಡುವುದು ಪ್ರಧಾನಿಯವರ ಯೋಜನೆಯಾಗಿದೆ. ದೇಶಕ್ಕೆ ದುಃಖ!’ ಎಂದು ದೆಹಲಿ ಸಿಎಂ ಟ್ವೀಟ್ ಮಾಡಿದ್ದಾರೆ. ಸಿಸೋಡಿಯಾ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ (ಎಂಎಚ್‌ಎ) ಅನುಮತಿ ನೀಡಿದ ದಿನಗಳ ನಂತರ ಸಿಬಿಐ ಎಫ್‌ಐಆರ್ ದಾಖಲಿಸಿದೆ.