Sunday, 15th December 2024

ಸಾಮಾಜಿಕ ಹೋರಾಟಗಾರ್ತಿ ನವದೀಪ್ ಕೌರ್ ಗೆ ಜಾಮೀನು ಮಂಜೂರು

ನವದೆಹಲಿ: ಸಾಮಾಜಿಕ ಹೋರಾಟಗಾರ್ತಿ ನವದೀಪ್ ಕೌರ್ ಗೆ ಪಂಜಾಬ್ ಹಾಗೂ ಹರ್ಯಾಣ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ದಲಿತ ಕಾರ್ಮಿಕ ಹೋರಾಟಗಾರ್ತಿ ಕೌರ್ ಅವರನ್ನು ಜನವರಿ 12ರಂದು ಕುಂಡ್ಲಿ ಗಡಿಭಾಗದಲ್ಲಿ ಕಾರ್ಮಿಕರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂದರ್ಭ ಪೊಲೀಸರು ಬಂಧಿಸಿದ್ದರು. ತನ್ನ ವಿರುದ್ಧ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದಲ್ಲಿ ಕೌರ್ ಇಂದು ಜಾಮೀನು ಪಡೆದಿದ್ದಾರೆ.

ಕೌರ್ ಅವರನ್ನು ಹರ್ಯಾಣದ ಕರ್ನಲ್ ಜೈಲಿನಲ್ಲಿ ಇಡಲಾಗಿತ್ತು. ಕಸ್ಟಡಿಯಲ್ಲಿದ್ದಾಗ ಪೊಲೀಸರು ತನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಕೌರ್ ಆರೋಪಿಸಿದ್ದರು. ಆದರೆ ಜೈಲು ಅಧಿಕಾರಿಗಳು ಈ ಆರೋಪವನ್ನು ನಿರಾಕರಿಸಿದ್ದರು.