Monday, 16th September 2024

ಸೋನಿಯಾ ಗಾಂಧಿ ಜನ್ಮದಿನಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ, ಸಚಿವ ಗಡ್ಕರಿ

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಜನ್ಮ ದಿನ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೆಂದ್ರ ಮೋದಿ ಹಾಗೂ ಸಚಿವ ನಿತಿನ್ ಗಡ್ಕರಿ ಶುಭಾಶಯ ಕೋರಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೊದಿ ‘ಸೋನಿಯಾ ಗಾಂಧಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ನೀಡಲಿ’ ಎಂದು ಶುಭ ಕೋರಿದ್ದಾರೆ.

ನಿತಿನ್ ಗಡ್ಕರಿ ಶುಭ ಕೋರಿದ್ದು, ‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರಿಗೆ ಜನ್ಮ ದಿನದ ಶುಭಾಶಯಗಳು ಎಂದು ಹಾರೈಸಿದ್ದಾರೆ.

ಸೋನಿಯಾ ಗಾಂಧಿಯವರು ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನವನ್ನು ಬೆಂಬಲಿಸಿ ಈ ಬಾರಿ ತಮ್ಮ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದಾರೆ.

Leave a Reply

Your email address will not be published. Required fields are marked *