Friday, 13th December 2024

ನ್ಯಾಷನಲ್ ಹೆರಾಲ್ಡ್ ಕೇಸ್: ವಿಚಾರಣೆಗೆ ಹಾಜರಾದ ಸೋನಿಯಾ ಗಾಂಧಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಎರಡನೇ ಬಾರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಮಂಗಳವಾರ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಜಾರಿ ನಿರ್ದೇಶನಾಲಯ ಕಚೇರಿಗೆ ಸೋನಿಯಾ ಗಾಂಧಿ ಆಗಮಿಸಿ ದರು. ಸೋನಿಯಾ ಗಾಂಧಿ ತನಿಖೆ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಹಾಗೂ ಕಾಂಗ್ರೆಸ್ ಕೇಂದ್ರ ಕಚೇರಿ ಸುತ್ತಮುತ್ತ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.