Sunday, 15th December 2024

ರಾಜ್ಯಸಭಾ ಸಂಸದರಾಗಿ ಸೋನಿಯಾ ಪ್ರಮಾಣ ವಚನ ಸ್ವೀಕಾರ

ವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಏಪ್ರಿಲ್ 3 ರಂದು ತಮ್ಮ ಅಧಿಕಾರಾವಧಿಯನ್ನು ಪೂರ್ಣ ಗೊಳಿಸಿದ ನಂತರ ತೆರವಾದ ಸ್ಥಾನ ತುಂಬಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಗುರುವಾರ ರಾಜಸ್ಥಾನದಿಂದ ಮೊದಲ ಬಾರಿಗೆ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಏಳು ಹಂತಗಳಲ್ಲಿ ನಡೆಯಲಿರುವ ಮುಂಬರುವ ಲೋಕಸಭಾ ಚುನಾವಣೆಗೆ ಕೆಲವು ದಿನಗಳ ಮೊದಲು ಇದು ನಡೆದಿದೆ.

ಸದನದ ನಾಯಕ ಪಿಯೂಷ್ ಗೋಯಲ್ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಸೋನಿಯಾ ಗಾಂಧಿ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಮತ್ತು ಪ್ರಧಾನ ಕಾರ್ಯದರ್ಶಿ ಪಿ.ಸಿ.ಮೋದಿ ಉಪಸ್ಥಿತರಿದ್ದರು.