Friday, 13th December 2024

ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಜಾಮೀನು ಅರ್ಜಿ ವಿಚಾರಣೆ ಇಲ್ಲ

ವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನವನ್ನು ಪ್ರಶ್ನಿಸಿ ಹಾಗೂ 2024ರ ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಕೋರಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ರಜಾಕಾಲದ ಪೀಠವು ಹೇಮಂತ್ ಸೊರೆನ್ ಅವರು ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ಅವರನ್ನು ತರಾಟೆಗೆ ತೆಗೆದು ಕೊಂಡಿತು.

“ನಿಮ್ಮ ನಡವಳಿಕೆ ಬಹಳಷ್ಟು ಹೇಳುತ್ತದೆ. ನಿಮ್ಮ ಕಕ್ಷಿದಾರರು ಧೈರ್ಯದಿಂದ ಬರುತ್ತಾರೆ ಎಂದು ನಾವು ನಿರೀಕ್ಷಿಸಿದ್ದೆವು. ಆದರೆ ನೀವು ಭೌತಿಕ ಸಂಗತಿಗಳನ್ನು ಮರೆಮಾಚಿದ್ದೀರಿ” ಎಂದು ನ್ಯಾಯಾಲಯ ಹೇಮಂತ್ ಸೊರೆನ್ ಅವರ ವಕೀಲರಿಗೆ ತಿಳಿಸಿದೆ.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಈ ಹಿಂದೆ ಮಧ್ಯಂತರ ಜಾಮೀನು ಪಡೆದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗಿಂತ ಹೇಮಂತ್ ಸೊರೆನ್ ಅವರ ಪ್ರಕರಣವನ್ನು ಪ್ರತ್ಯೇಕಿಸುವ ವ್ಯತ್ಯಾಸಗಳನ್ನು ನ್ಯಾಯಾಲಯ ಒತ್ತಿಹೇಳಿದೆ.

ಮೇ 10 ರಂದು ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದಾಗ, ಅವರು ಟ್ರಿಯಾದಿಂದ ನಿಯಮಿತ ಜಾಮೀನು ಪಡೆದಿರಲಿಲ್ಲ.