Thursday, 12th December 2024

ಸ್ವರ ಸಾಮ್ರಾಟ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಚಿಂತಾಜನಕ

ಚೆನ್ನೈ: ಸ್ವರ ಸಾಮ್ರಾಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚಿಂತಾಜನಕವಾಗಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಪ್ರಕಟಿಸಿದ ಹಿನ್ನೆಲೆಯಲ್ಲಿ ತಮಿಳುನಾಡು ಆರೋಗ್ಯ ಸಚಿವ ವಿಜಯ್ ಭಾಸ್ಕರ್ ಆಸ್ಪತ್ರೆಗೆ ಭೇಟಿ ನೀಡಿದರು.

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ.5ರಂದು ವೈದ್ಯರ ಸಲಹೆ ಮೇರೆಗೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಶ್ವಾಸಕೋಶದ ತೊಂದರೆ ಹಾಗೂ ವಿವಿಧ ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಎಸ್.ಪಿ.ಬಿ. ಶೀಘ್ರದಲ್ಲೇ ಅವರು ಗುಣಮುಖರಾಗಿ ಮನೆಗೆ ತೆರಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಗಾಯಕನ ಆರೋಗ್ಯ ಗಂಭೀರವಾಗಿದೆ ಎಂದು ಹೇಳಿದೆ.

ಎಸ್.ಪಿ.ಬಿ. ಅವರ ಆರೋಗ್ಯ ಎರಡು ದಿನಗಳಿಂದ ಕ್ಷೀಣಿಸುತ್ತಿದ್ದು, ನುರಿತ ವೈದ್ಯರು ನಿಗಾ ವಹಿಸಿದ್ದಾರೆ ಎಂದು ಆಸ್ಪತ್ರೆ ಪ್ರಕಟಿಸಿದೆ.