Friday, 22nd November 2024

ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್: ಪ್ರಕಾಶ್ ಜಾವ್ಡೇಕರ್

ನವದೆಹಲಿ: ರೈತರ ಪ್ರತಿಭಟನೆ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಕಬ್ಬು ಬೆಳೆಗಾರರಿಗೆ 3,500 ಕೋಟಿ ಮೊತ್ತದ ಸಬ್ಸಿಡಿಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದರು.

ಈ ವರ್ಷ 310 ಲಕ್ಷ ಟನ್ ಸಕ್ಕರೆ ಉತ್ಪಾದನೆ ಮಾಡಲಾಗುತ್ತಿದ್ದು, ಸಬ್ಸಿಡಿಯಿಂದ ಸಕ್ಕರೆ ಉತ್ಪಾದನೆಗೆ ಅನುಕೂಲವಾಗಲಿದೆ. ಒಟ್ಟಾರೆ ವಿಶೇಷ ಪ್ಯಾಕೇಜ್ ನಿಂದ 5 ಕೋಟಿ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.