ಬೆಂಗಳೂರು: 10ನೇ ತರಗತಿ ತೇರ್ಗಡೆಯಾಗಿ ಸರ್ಕಾರಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ಇಲ್ಲಿದೆ ಭರ್ಜರಿ ಅವಕಾಶ. ಸಿಬ್ಬಂದಿ ನೇಮಕಾತಿ ಆಯೋಗ (Staff Selection Commission) ಬರೋಬ್ಬರಿ 39,481 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2024). ಕಾನ್‌ಸ್ಟೇಬಲ್, ರೈಫಲ್ ಮ್ಯಾನ್, ಸಿಪಾಯಿ ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 14 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಗಡಿ ಭದ್ರತಾ ಪಡೆ (BSF) – 15,654, ಕೇಂದ್ರ ಮೀಸಲು ಪೊಲೀಸ್ ಪಡೆ (CISF) – 7,145, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CRPF) – 11,541, ಸಶಸ್ತ್ರ ಸೀಮಾ ಬಲ್ (SSB) – 819, ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) – 3,017, ಅಸ್ಸಾಂ ರೈಫಲ್ಸ್ (AR) – 1,248, ಸೆಕ್ರೇಟರಿಯಟ್ ಸೆಕ್ಯೂರಿಟಿ ಫೋರ್ಸ್ (SSF) – 35, ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ (NCB) – 22 ಹುದ್ದೆಗಳಿವೆ. 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಒಟ್ಟು ಹುದ್ದೆಗಳ ಪೈಕಿ 35,612 ಪುರುಷರು ಮತ್ತು 3,869 ಮಹಿಳೆಯರ ನೇಮಕ ನಡೆಯಲಿದೆ.
ವಯೋಮಿತಿ ಮತ್ತು ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 23 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಮತ್ತು ಮಾಜಿ ಯೋಧರಿಗೆ 3 ವರ್ಷ ಮತ್ತು ಎಸ್ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಇಎಸ್‌ಎಂ / ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಇತರ ಎಲ್ಲಾ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್.
ಆಯ್ಕೆ ವಿಧಾನ
ಕಂಪ್ಯೂಟರ್ ಆಧಾರಿತ ಪರೀಕ್ಷೆ, ಪಿಸಿಕಲ್ ಸ್ಟಾಂಡರ್ಡ್ ಟೆಸ್ಟ್, ಫಿಸಿಕಲ್ ಎಫಿಶಿಯೆನ್ಸಿ ಟೆಸ್ಟ್, ವೈದ್ಯಕೀಯ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆ ನಡೆಯಲಿದೆ. ಪರೀಕ್ಷೆ 2025ರ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆ ಇದೆ.
ಮಾಸಿಕ ವೇತನ
ಕಾನ್‌ಸ್ಟೇಬಲ್ (ಜಿಡಿ), ರೈಫಲ್ ಮ್ಯಾನ್ (ಜಿಡಿ) – 21,700 ರೂ. – 69,100 ರೂ.
ಸಿಪಾಯಿ – 18,000 ರೂ. – 56,900 ರೂ. ಮಾಸಿಕ ವೇತನ ದೊರೆಯಲಿದೆ.
SSC Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://ssc.gov.in/login).
- ಹೆಸರು ನೋಂದಾಯಿಸಿ ಲಾಗಿನ್ ಆಗಿ.
- ಸೂಕ್ತ ಮಾಹಿತಿ ನೀಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ವೈಯಕ್ತಿಕ, ಶೈಕ್ಷಣಿಕ ವಿವರಗಳನ್ನು ನಮೂದಿಸಿ.
- ಅಗತ್ಯ ದಾಖಲೆ, ಫೋಟೋಗಳನ್ನು ಸೂಕ್ತ ಅಳತೆಯಲ್ಲಿ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ರಿಕ್ವೆಸ್ಟ್ ನಂಬರ್ ಅಥವಾ ಅಪ್ಲಿಕೇಷನ್ ನಂಬರ್ ನೋಟ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್ ವಿಳಾಸ: ssc.gov.inಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: Railway Jobs: ಕೊಂಕಣ ರೈಲ್ವೆಯಲ್ಲಿ ಕರ್ನಾಟಕದವರಿಗೆ 190 ಉದ್ಯೋಗ, ಸರ್ಜಿ ಸಲ್ಲಿಸುವುದು ಹೀಗೆ