ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಡಿ.26ರಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 95.41 ರೂ, ಡೀಸೆಲ್ ಬೆಲೆ ಲೀಟರ್‌ಗೆ 86.67 ರೂ., ಮುಂಬೈನಲ್ಲಿ ಪೆಟ್ರೋಲ್ ಬೆಲೆ 109.98 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 94.14 ರೂ.ನಂತೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ (7 ಪೈಸೆಯಷ್ಟು ಏರಿಕೆ) 100.65 ರೂ. ಇದ್ದರೆ, ಡೀಸೆಲ್ ಲೀಟರ್‌ಗೆ 85.08 ರೂ. ಇದೆ.
ಚೆನ್ನೈನಲ್ಲಿ ಪೆಟ್ರೋಲ್ 101.40 ರೂ. ಇದ್ದರೆ, ಡೀಸೆಲ್ 91.43 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 104.67 ರೂ. ಇದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ 89.79 ರೂ. ಇದೆ.
ದೀಪಾವಳಿ ಹಬ್ಬದ ಮುನ್ನಾ ದಿನ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ವನ್ನು ಕಡಿತಗೊಳಿಸಿತ್ತು. ಪೆಟ್ರೋಲ್ ಲೀಟರ್‌ಗೆ 5 ರೂ. ಮತ್ತು ಡೀಸೆಲ್ ಮೇಲೆ 10 ರೂ.ಕಡಿತಗೊಳಿಸಿತ್ತು.
ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಶೇ.30 ರಿಂದ ಶೇ.19.4ಕ್ಕೆ ಇಳಿಸಲು ನಿರ್ಧರಿಸಿದ್ದರಿಂದ ಪೆಟ್ರೋಲ್ ಬೆಲೆ ಪ್ರಸ್ತುತ ಲೀಟರ್ ಗೆ 103 ರೂ.ನಿಂದ 95 ರೂ.ಗೆ ಇಳಿದಿದೆ. ಪ್ರಸ್ತುತ ದೇಶದ 4 ಮೆಟ್ರೋ ನಗರಗಳಲ್ಲಿ ಇಂಧನ ದರ ಅತ್ಯಧಿಕವಾಗಿದೆ.