Saturday, 14th December 2024

ಚಿನ್ನದ ಬೆಲೆ ಸ್ಥಿರ

ನವದೆಹಲಿ : ಭಾರತದಲ್ಲಿ ಚಿನ್ನದ ಬೆಲೆಯು ಶುಕ್ರವಾರ ಸ್ಥಿರವಾಗಿದೆ. ಗುರುವಾರ ಇದ್ದ ಬೆಲೆಯೇ ಶುಕ್ರವಾರವೂ ಮುಂದುವರಿದಿದೆ.

ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 49,550 ರೂಪಾಯಿ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 54,060 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರವು 70,000 ರೂಪಾಯಿಗೆ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,550 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 54,060 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,550 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 54,060 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,550 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 54,060 ರೂ. ಇದೆ. ಚೆನ್ನೈನಲ್ಲಿ 50,050 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 54,600 ರೂಪಾಯಿ ಆಗಿದೆ.

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,550 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 54,060 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.