Sunday, 3rd November 2024

ಟಾಟಾ ಸ್ಟೀಲ್ ಫ್ಯಾಕ್ಟರಿಯಲ್ಲಿ ಸ್ಫೋಟ: ಇಬ್ಬರಿಗೆ ಗಾಯ

#tata

ರಾಂಚಿ: ಜೆಮ್‌ಶೆಡ್‌ಪುರದ ಟಾಟಾ ಸ್ಟೀಲ್ ಫ್ಯಾಕ್ಟರಿಯಲ್ಲಿ ಶನಿವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ಬೆಂಕಿ ಹೊತ್ತಿ ಕೊಂಡಿದೆ.

ಘಟನೆಯಲ್ಲಿ ಗಾಯಗೊಂಡ ಎಲ್ಲಾ ಉದ್ಯೋಗಿಗಳಿಗೆ ತುರ್ತು ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಗಳು ಹೇಳಿದ್ದಾರೆ. ಜೆಮ್‌ಶೆಡ್‌ ಪುರ ಜಿಲ್ಲಾಡಳಿತ ಟಾಟಾ ಸ್ಟೀಲ್ ಫ್ಯಾಕ್ಟರಿ ಜೊತೆ ನಿರಂತರ ಸಂಪರ್ಕದಲ್ಲಿದೆ.

ಟಾಟಾ ಸ್ಟೀಲ್‌ ಘಟಕದ ಬ್ಯಾಟಕಿ ಕೋಕ್ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಅಗ್ನಿಶಾಮಕ ದಳದ ವಾಹನಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದವು.

ಘಟಕದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.  ಮೂವರ ಆರೋಗ್ಯ ಸ್ಥಿರವಾಗಿದೆ.