Monday, 25th November 2024

ನಟ ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ

ಕಾಶ್ಮೀರ: ಸಿನಿಮಾ ಶೂಟಿಂಗ್‌ ಮಾಡುತ್ತಿದ್ದ ಬಾಲಿವುಡ್‌ ನಟ ಇಮ್ರಾನ್ ಹಶ್ಮಿ ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನಟ ಹಶ್ಮಿ ತಮ್ಮ ಮುಂಬರುವ ಚಿತ್ರದ ಚಿತ್ರೀಕರಣವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಸುತ್ತಿದ್ದಾರೆ. ಹಶ್ಮಿ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಮುಂಬರುವ ಚಿತ್ರ ‘ಗ್ರೌಂಡ್ ಜೀರೋ’ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಪಹಲ್ಗಾಮ್‌ನಲ್ಲಿ ಎಲ್ಲಾ ಶೂಟಿಂಗ್ ಕೆಲಸಗಳು ನಡೆಯುತ್ತಿವೆ. ಆದರೆ ಇಲ್ಲಿ ಹಶ್ಮಿ ಮೇಲೆ ಕಲ್ಲು ತೂರಾಟ ನಡೆಸಲಾಯಿತು.

ಇತ್ತೀಚೆಗಷ್ಟೇ ಇಮ್ರಾನ್ ಶೂಟಿಂಗ್ ಮುಗಿಸಿ ಸೆಟ್‌ನಿಂದ ಹೊರಗೆ ಬಂದಾಗ ದುಷ್ಕರ್ಮಿ ಗಳು ಕಲ್ಲು ಎಸೆದಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದ್ದಾರೆ.

ಸಂಜೆ ಶೂಟಿಂಗ್ ಮುಗಿಸಿದ ನಂತರ, ಇಮ್ರಾನ್ ಹಶ್ಮಿ ಚಿತ್ರತಂಡದೊಂದಿಗೆ ಪಹಲ್ಗಾಮ್ ಮುಖ್ಯ ಮಾರುಕಟ್ಟೆಗೆ ತೆರಳಿದರು. ಆಗ ಅಪರಿಚಿತರು ನಟನ ಜೊತೆಯಲ್ಲಿದ್ದವರೆಲ್ಲರ ಮೇಲೆ ಹಲ್ಲೆ ನಡೆಸಿದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇನ್ನೂ ಗ್ರೌಂಡ್ ಜೀರೋ ಸಿನಿಮಾ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಜವಾನರನ್ನು ಆಧರಿಸಿದೆ. ಈ ಚಿತ್ರದಲ್ಲಿ ಇಮ್ರಾನ್ ಹಶ್ಮಿ ಸೇನಾಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಹಲ್ಗಾಮ್ ಮೊದಲು, ಶ್ರೀನಗರದಲ್ಲಿ ಈ ಸಿನಿಮಾ ಶೂಟಿಂಗ್ ನಡೆದಿತ್ತು.