Thursday, 12th December 2024

ಜಹಾಂಗೀರ್‌ಪುರಿಯಲ್ಲಿ ಕಲ್ಲು ತೂರಾಟ

ನವದೆಹಲಿ: ಜಹಾಂಗೀರ್‌ಪುರಿಯಲ್ಲಿ ಮತ್ತೆ ಎರಡು ಗುಂಪುಗಳ ನಡುವೆ ಮಂಗಳವಾರ ರಾತ್ರಿ ಕಲ್ಲು ತೂರಾಟ ನಡೆದಿದೆ.

ಕೋಮು ಸಂಘರ್ಷದಿಂದಾಗಿ ಈಗಾಗಲೇ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿರುವುದು ಮತ್ತಷ್ಟು ಭೀತಿಯ ವಾತಾವರಣ ಸೃಷ್ಟಿಸಿದೆ. ಎರಡು ಗುಂಪುಗಳ ನಡುವೆ ವಾಗ್ವಾದ ಉಂಟಾಗಿ ಕಲ್ಲು ತೂರಾಟ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಕಲ್ಲು ತೂರಾಟಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಯನ್ನು ಟ್ಟೀಟ್ ಮಾಡಿದ್ದು, ಘಟನೆ ಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದೆ.