Sunday, 15th December 2024

ಗೋವಾಕ್ಕೆ ಆಗಮಿಸುವವರ ಮೇಲೆ ಸರ್ಕಾರ ಹದ್ದಿನ ಕಣ್ಣು, ಗಡಿಯಲ್ಲಿ ಹೆಚ್ಚಿನ ಕಟ್ಟೆಚ್ಚರ

ಪಣಜಿ : ಹೊರ ರಾಜ್ಯಗಳಿಂದ ಗೋವಾಕ್ಕೆ ಆಗಮಿಸುವವರ ನಾಗರಿಕರ ಮೇಲೆ ಸರ್ಕಾರ ಹದ್ದಿನ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ಗೋವಾ ಗಡಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರ, ಕೇರಳ, ಕರ್ನಾಟಕ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಕೇರಳದಿಂದ ರೈಲ್ವೆಯ ಮೂಲಕ ಜನರು ಆಗಮಿಸುವ ಹಿನ್ನೆಲೆಯಲ್ಲಿ ನಿಲ್ದಾಣದಲ್ಲಿಯೂ ಕಡ್ಡಾಯ ತಪಾಸಣೆ ನಡೆಸಲಾಗುತ್ತಿದೆ. ಹೊರ ರಾಜ್ಯಗಳಿಂದ ಆಗಮಿಸುವವರಿಗೆ 72 ಗಂಟೆಗಳ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯಗೊಳಿಸಲಾಗಿದೆ.

ಕರ್ನಾಟಕದಿಂದ ಗೋವಾಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಆಗಮಿಸುತ್ತಿದ್ದರೂ ಕೂಡ ಗೋವಾಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರು ಕೋವಿಡ್ ಆಯಂಟಿಜನ್ ನೆಗೆಟಿವ್ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯವಿದೆ. ಗೋವಾದ ಎಲ್ಲ ಗಡಿಗಳಲ್ಲಿಯೂ ಕೋವಿಡ್ ತಪಾಸಣಾ ಕೇಂದ್ರವನ್ನು ಸರ್ಕಾರ ಸ್ಥಾಪಿಸಿದೆ. ಒಂದು ವೇಳೆ ಕೋವಿಡ್ ಸೋಂಕು ದೃಢಪಟ್ಟರೆ ಅಂತವರು ತಮ್ಮ ರಾಜ್ಯಕ್ಕೆ ಮರಳಿ ತೆರಳಬೇಕಾಗಲಿದೆ.