Thursday, 12th December 2024

ಪರೀಕ್ಷೆಯಲ್ಲಿ ಹೆಚ್ಚು ಅಂಕ ತರುವ ಒತ್ತಡ: ವಿದ್ಯಾರ್ಥಿ ಆತ್ಮಹತ್ಯೆ

ಹೈದರಾಬಾದ್: ವಸತಿ ಶಾಲೆಯಲ್ಲೇ 16 ವರ್ಷದ ವಿದ್ಯಾರ್ಥಿಯೊಬ್ಬ ದುರಂತ ಅಂತ್ಯ ಕಂಡಿದ್ದಾರೆ.

ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ವಸತಿ ನಿಲಯದಿಂದ ನಾಪತ್ತೆಯಾಗಿದ್ದ. ಸಹ ವಿದ್ಯಾರ್ಥಿಗಳು ಆತನನ್ನು ಹುಡುಕಿದಾಗ ಆತ ಶಾಲೆಯ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ವರದಿ ತಿಳಿಸಿದೆ.

ವಿದ್ಯಾರ್ಥಿ ಪಕ್ಕದ ಊರಿನವನೇ ಆಗಿದ್ದು, ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಸಹ ವಿದ್ಯಾರ್ಥಿಗಳು ಕೂಡಲೇ ವಿದ್ಯಾರ್ಥಿಯನ್ನು ಬೇರೆ ವಾಹನದ ನೆರವು ಪಡೆದುಕೊಂಡು ಆಸ್ಪತ್ರೆಗೆ ದಾಖಲಿದ್ದಾರೆ. ಆದರೆ ಆದಾಗಲೇ ವಿದ್ಯಾರ್ಥಿ ಮೃತಪಟ್ಟಿದ್ದ.

ವಿದ್ಯಾರ್ಥಿ ನೈಲಾನ್‌ ಹಗ್ಗದಿಂದ ನೇಣು ಬಿಗಿದುಕೊಂಡಿದ್ದಾನೆ. ಯಾವುದೇ ಸೊಸೈಡ್‌ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಪರೀಕ್ಷೆಯಲ್ಲಿ ಜಾಸ್ತಿ ಅಂಕ ತರಬೇಕೆನ್ನುವ ಒತ್ತಡದಿಂದ ಈ ರೀತಿ ನಮ್ಮ ಸ್ನೇಹಿತ ಮಾಡಿಕೊಂಡಿದ್ದಾನೆ ಎಂದು ಕೆಲ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಮೃತ ವಿದ್ಯಾರ್ಥಿಯ ಪೋಷಕರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದು, ಶಾಲೆಗೆ ಎರಡು ದಿನಗಳ ರಜೆ ಘೋಷಿಸಲಾಗಿದೆ.

ವಿದ್ಯಾರ್ಥಿಯನ್ನು ಕರೆದುಕೊಂಡು ಹೋಗಲು ಹಾಸ್ಟೆಲ್‌ ವಾರ್ಡನ್‌ ಯಾಕೆ ವಾಹನದ ವ್ಯವಸ್ಥೆಯನ್ನು ಮಾಡಿಲ್ಲ ಎನ್ನುವುದು ಇದುವರೆಗೆ ಸ್ಪಷ್ಟ ವಾಗಿಲ್ಲ. ಇತ್ತೀಚೆಗೆ ತೆಲಂಗಾಣದಲ್ಲಿ ಪ್ರೀತಿ ಎಂಬ ಮೆಡಿಕಲ್‌ ವಿದ್ಯಾರ್ಥಿಯೊಬ್ಬಳು ಖಾಸಗಿ ಫೋಟೋಗಳನ್ನು ಲೀಕ್‌ ಮಾಡಿದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು.