Wednesday, 11th December 2024

ಸುಜಾತಾ ಮೊಂಡಾಲ್ ಖಾನ್ ಟಿಎಂಸಿ ಪಕ್ಷಕ್ಕೆ ಸೇರ್ಪಡೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಒಂದು ಕಡೆ ಆಡಳಿತಾರೂಢ ಟಿಎಂಸಿಯ ಶಾಸಕರು ಬಿಜೆಪಿಯತ್ತ ಜಿಗಿಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವ ಒಪ್ಪಿ, ಟಿಎಂಪಿ ಪಕ್ಷಕ್ಕೆ ಸೇರ್ಪಡೆ ಯಾಗುತ್ತಿದ್ದಾರೆ.

ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಮೊಂಡಾಲ್ ಖಾನ್ ಸೋಮವಾರ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದಾರೆ. ಕೇಸರಿ ಪಕ್ಷದಲ್ಲಿ ನಿಷ್ಠಾವಂತರನ್ನು ಕಡೆಗಣಿಸಿ ಹೊಸದಾಗಿ ಸೇರಿಕೊಡ ಭ್ರಷ್ಟಾಚಾರ ಮುಖಂಡರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡ ಲಾಗುತ್ತದೆ ಎಂದು ಆರೋಪಿಸಿದ್ದಾರೆ.

ಟಿಎಂಸಿ ಸಂಸದ ಸೌಗತ ರಾಯ್ ಮತ್ತು ಅದರ ವಕ್ತಾರ ಕುನಾಲ್ ಘೋಷ್ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡೆಯಾದ ಬಳಿಕ ಮಾತನಾಡಿದ ಸುಜಾತಾ, ಮತ್ತೆ ಬಿಜೆಪಿಗೆ ಹೋಗಲ್ಲ, ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರ ನಾಯಕತ್ವ ದಡಿಯಲ್ಲಿ ಕೆಲಸ ಮಾಡುವುದಾಗಿ ಹೇಳಿದರು.